ನ್ಯೂಸ್‌ ಜೊತೆಗೆ ಫೇಕ್‌ ನ್ಯೂಸ್‌ ಇದ್ದೇ ಇರತ್ತೆ, ನೀವ್‌ ಹುಷಾರಾಗಿರಬೇಕಷ್ಟೇ: ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನ್ಯೂಸ್‌ ಜೊತೆಗೆ ಫೇಕ್‌ ನ್ಯೂಸ್‌ ಇದ್ದೇ ಇರತ್ತೆ, ನೀವ್‌ ಹುಷಾರಾಗಿರಬೇಕಷ್ಟೇ, ಇಡೀ ಸಮಾಜ ಯಾವ ಸುದ್ದಿಯನ್ನು ನಂಬಬೇಕು, ಯಾವುದನ್ನು ನಂಬಬಾರದು, ಯಾವುದು ಸತ್ಯ ಯಾವುದು ಸುಳ್ಳು ಎನ್ನುವುದನ್ನು ಪರಾಮರ್ಶೆ ಮಾಡಬೇಕು. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ ಹಾಗೂ ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ,  ಪತ್ರಿಕಾ ಹಾಗೂ ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು. ಸಾಮಾಜಿಕ‌ ಜಾಲತಾಣಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು, ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಹೇಳಿದರು.

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಫ್ಯಾಕ್ಟ್ ಚೆಕ್ ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮಗಳು ಸತ್ಯಸಂಗತಿ ಜನರಿಗೆ ತಿಳಿಸಿ, ಸುಳ್ಳುಸುದ್ದಿಗೆ ಜನರು ಬಲಿಯಾಗದಂತೆ ತಡೆಯಬೇಕು ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!