ನಟಿ ರನ್ಯಾ ಕೇಸ್ ಜೊತೆಗೆ ಡಿಜಿಪಿ ಕೆ.ರಾಮಚಂದ್ರ ರಾವ್ ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಮತ್ತೆ ಮರುಜೀವ

ಹೊಸ ದಿಗಂತ ಡಿಜಿಟಲ್ ಡೆಸ್ಕ್;

ನಟಿ ರನ್ಯಾ ರಾವ್ ಪ್ರಕರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಡಿಜಿಪಿ ಕೆ.ರಾಮಚಂದ್ರ ರಾವ್ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಮಚಂದ್ರ ರಾವ್ ಅವರ ಹೆಸರು ತಳಕು ಹಾಕಿಕೊಂಡಿರುವ 2014ರ ಇಲವಾಲ ಪೊಲೀಸ್ ದರೋಡೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.

ಪ್ರಕರಣ ನಡೆದು 11 ವರ್ಷಗಳಾಗಿದ್ದು, ಮತ್ತೆ ಕೇಸ್ ಬಗ್ಗೆ ಚರ್ಚೆಗೆ ಬಂದಿದೆ. ಪ್ರಕರಣಕ್ಕೆ ಮರುಜೀವ ಕೊಡಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಸಿಬಿಐಗೆ 9 ಪುಟಗಳ ಪತ್ರ ಬರೆದಿದ್ದಾರೆ.

ಚಿನ್ನ ಕಳ್ಳಸಾಗಣೆ ಮಾಡಿದ ವ್ಯಕ್ತಿಗಳ ವಿರುದ್ಧ ಹಾಗೂ ಪ್ರಕರಣ ಮುಚ್ಚಿ ಹಾಕಿದ ಪೊಲೀಸರ ವಿರುದ್ಧ ತನಿಖೆ ನಡೆಸುವಂತೆ ಸ್ನೇಹಮಯಿ ಕೃಷ್ಣ ಸಿಬಿಐಗೆ 9 ಪುಟಗಳ ಪತ್ರ ಬರೆದಿದ್ದಾರೆ. ಅಂದಿನ ಸಿಐಡಿ ಡಿಜಿಪಿ ಕಿಶೋರ್​​ಚಂದ್ರ, ಸಿಐಡಿ ಐಜಿಪಿ ಪ್ರಣವ್ ಮೊಹಂತಿ, ಪೊಲೀಸ್​ ವರಿಷ್ಠಾಧಿಕಾರಿ ಕೃಷ್ಣಭಟ್, ಡಿವೈ‌ಎಸ್‌ಪಿ ರಾಘವೇಂದ್ರ ಹೆಗ್ಡೆ, ಅಂದಿ‌ನ ಮೈಸೂರು ಎಸ್​​ಪಿ ಅಭಿನವ ಖರೆ, ಡಿವೈ‌ಎಸ್‌ಪಿ ವಿಕ್ರಂ ಆಮ್ಟೆ, ಇಲವಾಲ ಪಿಎಸ್​​ಐ ಗಣೇಶ್ ಸೇರಿ ಹಲವರ ವಿರುದ್ಧ ಸಿಬಿಐಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.

ನಟಿ ರನ್ಯಾ ರಾವ್​ ಪ್ರಕರಣದ ಜೊತೆಗೆ ಇದನ್ನು ಸೇರಿಸಿಕೊಂಡು ತನಿಖೆ ಮಾಡಬೇಕು. ಸಾಧ್ಯವಾಗದಿದ್ದರೆ ಪ್ರತ್ಯೇಕ ಪ್ರಕರಣವಾಗಿ ತನಿಖೆ ನಡೆಸಿ. 2014ರಿಂದಲೇ ಈ ರೀತಿ ಚಿನ್ನ ಕಳ್ಳಸಾಗಣೆ ನಡೆದುಕೊಂಡು ಬರುತ್ತಿದೆ. ಪೊಲೀಸರು ಸರಿಯಾಗಿ ತನಿಖೆ ಮಾಡಿ ಆರೋಪಿಗಳನ್ನು ಪತ್ತೆ ಹಚ್ಚಿದ್ದರೇ, ಇಂತಹ ಪ್ರಕರಣ ತಡೆಯಬಹುದಿತ್ತು ಎಂದು ಸ್ನೇಹಮಯಿ ಕೃಷ್ಣ ಪತ್ರದಲ್ಲಿ ಬರೆದಿದ್ದಾರೆ.

ನಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!