Friday, February 3, 2023

Latest Posts

ಉಡುಪಿ ಪುತ್ತಿಗೆ ಮಠದಿಂದ ಪರ್ಯಾಯ ಪೂರ್ವ ಬಾಳೆ ಮುಹೂರ್ತ

ಹೊಸದಿಗಂತ ವರದಿ, ಉಡುಪಿ:

ಭಾವಿ ಪರ್ಯಾಯ ಪೀಠಾಧಿಪತಿ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥರು, ಪರ್ಯಾಯ ಪೂರ್ವ ಮುಹೂರ್ತಗಳಲ್ಲಿ ಮೊದಲನೆಯದಾದ ಬಾಳೆ ಮುಹೂರ್ತವನ್ನು ಶುಕ್ರವಾರ ಬೆಳಿಗ್ಗೆ 8.20ರ ಧನುರ್ಲಗ್ನದಲ್ಲಿ ಉಡುಪಿಯಲ್ಲಿ ನಡೆಸಿದರು.

ಇದಕ್ಕೂ ಮೊದಲು ಬೆಳಿಗ್ಗೆ 7 ಗಂಟೆಗೆ ಪುತ್ತಿಗೆ ಶ್ರೀ ವೀರವಿಠಲ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ನಡೆಸಲಾಯಿತು. ಬಳಿಕ ಬಾಳೆ ಕಂದುಗಳು ಹಾಗೂ ತುಳಸಿ ಗಿಡಗಳ ಸಹಿತ ಪುತ್ತಿಗೆ ಮಠದಿಂದ ಮೆರವಣಿಗೆಯಲ್ಲಿ ಚಂದ್ರೇಶ್ವರ, ಅನಂತೇಶ್ವರ ದೇವರ ಸನ್ನಿಧಿಗೆ ತೆರಳಿ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಕನಕನ ಕಿಂಡಿ ಮೂಲಕ ಕೃಷ್ಣದರ್ಶನದ ಬಳಿಕ ಕೃಷ್ಣಮಠಕ್ಕೆ ತೆರಳಿ ಶ್ರೀಕೃಷ್ಣ ಮುಖ್ಯಪ್ರಾಣ ಸನ್ನಿಧಿಯಲ್ಲಿ ಪ್ರಾರ್ಥಿಸಿ ಸುಬ್ರಹ್ಮಣ್ಯ, ನವಗ್ರಹ, ವೃಂದಾವನಗಳಲ್ಲಿ ಪ್ರಾರ್ಥನೆ ಸಲ್ಲಿಸಿ, ನಿಗದಿತ ಸ್ಥಳದಲ್ಲಿ ಬಾಳೆ ಮತ್ತು ತುಳಸಿ ಸಸಿಗಳನ್ನು ನೆಡಲಾಯಿತು.

ಧಾರ್ಮಿಕ ವಿಧಿ ವಿಧಾನವನ್ನು ಹೆರ್ಗ ವೇದವ್ಯಾಸ ಭಟ್, ಕೇಂಜ ಶ್ರೀಧರ ತಂತ್ರಿ, ರಾಘವೇಂದ್ರ ಕೊಡಂಚ ನಡೆಸಿದರು. ಶ್ರೀಮಠದ ಮೇಸ್ತ್ರಿ ಪದ್ಮನಾಭ ಸಹಕರಿಸಿದರು. ಶ್ರೀಮಠದ ಪ್ರಸನ್ನಾಚಾರ್ಯ, ನಾಗರಾಜ ಆಚಾರ್ಯ, ರತೀಶ ತಂತ್ರಿ ಸೇರಿದಂತೆ ನಾನಾ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!