Friday, August 19, 2022

Latest Posts

ಅಲ್ಯುಮಿನಿಯಂ ಏಣಿಗೆ ವಿದ್ಯುತ್ ತಂತಿ ಸ್ಪರ್ಶ: ಕಾರ್ಮಿಕ ಸಾವು

ಹೊಸದಿಗಂತ ವರದಿ, ಮಡಿಕೇರಿ:

ಕಾಫಿ ತೋಟದಲ್ಲಿ ಕಾಳು ಮೆಣಸು ಕೊಯ್ಯುತ್ತಿದ್ದ ಸಂದರ್ಭ ಅಲ್ಯುಮಿನಿಯಂ ಏಣಿಗೆ ವಿದ್ಯುತ್ ತಂತಿ ಸ್ಪರ್ಶಗೊಂಡು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ವೀರಾಜಪೇಟೆ ಸಮೀಪದ ಆರ್ಜಿ ಗ್ರಾಮದಲ್ಲಿ ನಡೆದಿದೆ.
ಆರ್ಜಿ ಗ್ರಾಮದ ಸಂತ ಅನ್ನಮ್ಮ ದೇವಾಲಯಕ್ಕೆ ಸೇರಿದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಬಾಸ್ಟಿನ್ ಲೋಬೋ(62) ಎಂಬವರೇ ಮೃತಪಟ್ಟ ದುರ್ದೈವಿ.
ಪತ್ನಿ ಸುಶೀಲಾ ಲೋಬೋ ಅವರು ನೀಡಿರುವ ದೂರಿನನ್ವಯ ವೀರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!