ಹೊಸದಿಗಂತ ವರದಿ,ಆಲೂರು:
ಬರ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಆಲೂರು ಹಾಗೂ ಕಟ್ಟಾಯ ಹೋಬಳಿಯನ್ನುಸೇರಿಸಿರುವುದಕ್ಕೆ ಶಾಸಕ ಸಿಮೆಂಟ್ ಮಂಜು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ನಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ಆಲೂರು ಮತ್ತು ಕಟ್ಟಾಯವನ್ನು ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನವಾಗಿತ್ತು.ಅಲ್ಲದೆ ಆಲೂರು ಹಾಗೂ ಕಟ್ಟಾಯ ಬಾಗದ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.
ಇದನ್ನು ಗಂಭೀರವಾಗಿ ಪರಿಗಣಿಸಿ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ವಿಭಾಗದ ಪ್ರಧಾನ ಕಾರ್ಯದರ್ಶಿ ರಶ್ಮಿಮಹೇಶ್ ರವರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸುವುದರ ಜೊತೆಗೆ ಸರ್ಕಾರ ಹಾಗೂ ಸಂಬಂಧಪಟ್ಟ ಮಂತ್ರಿಗಳನ್ನು ಬೇಟಿ ಮಾಡಿ
ಸಕಲೇಶಪುರ-ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಆಲೂರು ತಾಲ್ಲೂಕಿನಲ್ಲಿ ವಾಡಿಕೆ ಮಳೆಗಿಂತ ಈ ವರ್ಷ ಅತಿ ಕಡಿಮೆ ಮಳೆಯಾಗಿರುತ್ತದೆ. ಕೆರೆ ಕಟ್ಟೆಗಳಲ್ಲಿ ನೀರಿಲ್ಲದೆ ತಾಲ್ಲೂಕಿನ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಅಭಾವವಿದೆ. ಕೃಷಿ ಚಟುವಟಿಕೆಗಳು ಮಳೆ ಇಲ್ಲದೆ ಕುಂಠಿತಗೊಂಡಿರುತ್ತವೆ. ಆದ್ದರಿಂದ ಸರಕಾರ ಆಲೂರು ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಸಂಬಂಧಪಟ್ಟ ದಾಖಲೆಗಳನ್ನು ಮುಂದಿಟ್ಟು ಅಗ್ರಹಿಸಲಾಗಿತ್ತು.
ನಮ್ಮ ಮನವಿಗೆ ಸ್ಪಂದಿಸಿ ಸರ್ಕಾರ ಆಲೂರು ತಾಲೂಕು ಹಾಗೂ ಕಟ್ಟಾಯ ಹೋಬಳಿಯನ್ನು ಬರ ಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.