ಅಭಿವೃದ್ಧಿ ಚರ್ಚೆಗೆ ಸದಾ ಸಿದ್ಧ: ‘ಗೋ ಬ್ಯಾಕ್’ ಅಭಿಯಾನಕ್ಕೆ ತಿರುಗೇಟು ನೀಡಿದ ಶೋಭಾ

ಹೊಸದಿಗಂತ ಡಿಜಿಟಲ್ ಡೆಸ್ಖ್:

ತಮ್ಮ ವಿರುದ್ಧ ನಡೆಯುತ್ತಿರುವ ‘ಗೋ ಬ್ಯಾಕ್’ ಅಭಿಯಾನಕ್ಕೆ ತಿರುಗೇಟು ನೀಡಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಸಚಿವೆ ಶೋಭಾ ಕರಂದ್ಲಾಜೆ, ನಮ್ಮ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಬರುವುದಾದರೆ ನಾನು ಸಿದ್ಧ ಎಂದು ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿಂ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಟಿಕೆಟ್ ಕೇಳಲು ಎಲ್ಲರಿಗೂ ಅವಕಾಶವಿದೆ. ಹಾಗೆಂದು ಇನ್ನೊಬ್ಬರ ತೇಜೋವಧೆ ಮಾಡುವ ಕೆಲಸ ಸರಿಯಲ್ಲ. ನಾವು ಎಂದಿಗೂ ನಮ್ಮ ವಿರುದ್ದ ನಿಲ್ಲುವ ಅಭ್ಯರ್ಥಿಯನ್ನು ಅಲ್ಲಗಳೆಯುವುದಿಲ್ಲ, ತೇಜೋವಧೆಯೂ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯ ನಿಜವಾದ ಕಾರ್ಯಕರ್ತರು ಈ ರೀತಿ ಆರೋಪವನ್ನು ಮಾಡುವುದಿಲ್ಲ. ಯಾರೋ ಈ ರೀತಿ ಮಾಡಿಸಿದ್ದಾರೆ. ಅಧಿಕಾರಕ್ಕಾಗಿ ಪಕ್ಷಕ್ಕೆ ಬಂದವರು ಈ ರೀತಿ ಮಾಡಿಸಿರಬಹುದು, ಇದು ಈ ಹಿಂದೆಯೂ ನಡೆದಿದೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here