Monday, December 11, 2023

Latest Posts

ಏನೇ ಆದರೂ ಎಂದೆಂದಿಗೂ ನಿಮ್ಮ ಜತೆಗಿರುವೇನು: ಕೊಹ್ಲಿಗೆ ವಿಶೇಷವಾಗಿ ವಿಶ್ ಮಾಡಿದ ಅನುಷ್ಕಾ ಶರ್ಮಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿಗೆ ಇಂದು 35ನೇ ಹುಟ್ಟುಹಬ್ಬದ ಸಂಭ್ರಮ. ಕೊಹ್ಲಿಗೆ ಜಗತ್ತಿನ ಮೂಲೆ ಮೂಲೆಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿವೆ. ಇದೀಗ ಮಡದಿ ಅನುಷ್ಕಾ ಶರ್ಮಾಕೊಹ್ಲಿಗೆ ವಿನೂತನವಾಗಿ ಶುಭಕೋರುವ ಮೂಲಕ ಗಮನ ಸೆಳೆದಿದ್ದಾರೆ.

ನವೆಂಬರ್ 05ರಂದು ಡೆಲ್ಲಿಯಲ್ಲಿ ಜನಿಸಿದ ವಿರಾಟ್ ಕೊಹ್ಲಿ ಕಳೆದೊಂದುವರೆ ದಶಕದಿಂದಲೂ ಭಾರತ ಕ್ರಿಕೆಟ್ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದಾರೆ.

ಅನುಷ್ಕಾ ಶರ್ಮಾ ವಿರಾಟ್ ಕೊಹ್ಲಿ ಹೆಸರಿನಲ್ಲಿರುವ ಅಪರೂಪದ ಬೌಲಿಂಗ್ ರೆಕಾರ್ಡ್ ಸ್ಮರಿಸಿಕೊಂಡು ಶುಭಕೋರಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ತಮ್ಮ ಕ್ರಿಕೆಟ್ ವೃತ್ತಿಜೀವನದ ಆರಂಭದ ದಿನಗಳಲ್ಲಿ ಹಂಗಾಮಿ ಬೌಲರ್ ಅಗಿಯೂ ಕಾಣಿಸಿಕೊಂಡಿದ್ದರು. ಇನ್ನು ಬೌಲಿಂಗ್‌ನಲ್ಲಿ ಕೊಹ್ಲಿ ಹೆಸರಿನಲ್ಲಿ ಇಂದಿಗೂ ಒಂದು ದಾಖಲೆ ಅಚ್ಚಳಿಯದೇ ಉಳಿದಿದೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಸೊನ್ನೆ ಬಾಲ್‌ಗೆ ವಿಕೆಟ್ ಕಬಳಿಸಿದ ಮೊದಲ ಬೌಲರ್ ಎನ್ನುವ ದಾಖಲೆ ನಿರ್ಮಿಸಿದ್ದಾರೆ.

ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅನುಷ್ಕಾ ಶರ್ಮಾ, “ಅವರು ಅಕ್ಷರಶಃ ತಮ್ಮ ಜೀವನದ ಎಲ್ಲಾ ವಿಭಾಗದಲ್ಲೂ ಅತ್ಯದ್ಭುತ ವ್ಯಕ್ತಿ. ಆದರೆ ಅವರಯ ತಮ್ಮ ಸಾಧನೆಯ ಕಿರೀಟಕ್ಕೆ ಮತ್ತಷ್ಟು ಗರಿಗಳನ್ನು ಸೇರಿಸಿಕೊಳ್ಳುತ್ತಲೇ ಬಂದಿದ್ದಾರೆ. ಐ ಲವ್ ಯೂ. ಏನೇ ಆದರೂ ಎಂದೆಂದಿಗೂ ನಿಮ್ಮ ಜತೆಗಿರುತ್ತೇನೆ ವಿರಾಟ್ ಕೊಹ್ಲಿ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!