ಬೆಳ್ತಂಗಡಿಯ ಅಮೈ ದೇವರಾವ್‌ಗೆ ರಾಷ್ಟ್ರಪತಿಗಳಿಂದ ಪುರಸ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ICAR) ಆಯೋಜಿಸಿದ ರೈತರ ಹಕ್ಕುಗಳ ಕುರಿತ ಮೊದಲ ಜಾಗತಿಕ ವಿಚಾರ ಸಂಕಿರಣದಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯ ಕಿಲ್ಲೂರಿನ ಅಮೈ ದೇವ ರಾವ್ (Deva Rao) ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.

ವಿಚಾರ ಸಂಕಿರಣ (First Global Symposium on Farmers’ Rights) ದೆಹಲಿಯಲ್ಲಿ ಇಂದು ಆರಂಭಗೊಂಡಿದ್ದು ಸೆ.15ರವರೆಗೆ ನಡೆಯಲಿದೆ. ಈ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ರಾಷ್ಟ್ರಪತಿಗಳು ಕೃಷಿಯಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಿದರು.

ಅಮೈ ದೇವರಾವ್‌ ಅವರಿಗೆ ಈ ಹಿಂದೆ 2019ರಲ್ಲಿ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಿತ್ತು. ಕೃಷಿ ಕೆಲಸಕ್ಕೆ ʼತಳಿ ತಪಸ್ವಿʼ ಬಿರುದು ಸಿಕ್ಕಿದೆ. ರಾಷ್ಟ್ರಮಟ್ಟದ ಪ್ರತಿಷ್ಠಿತ ʼಸೃಷ್ಟಿ ಸಮ್ಮಾನ್‌ʼ ಪ್ರಶಸ್ತಿಯೂ ದೊರಕಿದೆ.

ಅಮೈ ದೇವರಾವ್‌?
ಐದು ಎಕರೆ ಗದ್ದೆಯಲ್ಲಿ 175ಕ್ಕೂ ಅಧಿಕ ಭತ್ತದ (P addy) ತಳಿಗಳನ್ನು ಬೆಳೆದಿರುವ ಸಾಧಕ. ವರ್ಷಕ್ಕೆ ಎರಡು ಬೆಳೆ ಬೆಳೆಯುತ್ತಿದ್ದು, ಪ್ರತಿಸಲವೂ 50 ಕ್ವಿಂಟಾಲ್‌ಗಿಂತಲೂಅಧಿಕ ಇಳುವರಿ ಸಿಗುತ್ತಿದೆ.ಒಂದೇ ಗದ್ದೆಯಲ್ಲಿ ಅನೇಕ ಬಗೆಯ ತಳಿಗಳನ್ನು ನಾಟಿ ಮಾಡುವ ದೇವರಾವ್ ಇದು ಯಾವ ತಳಿ ಎಂಬುದನ್ನು ಗುರುತಿಸುವ ಸಾಮರ್ಥ್ಯ ಹೊಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!