ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳು ನಟ ಶಿವ ಕಾರ್ತಿಕೇಯನ್ ಹಾಗೂ ನಟಿ ಸಾಯಿ ಪಲ್ಲವಿ ಅಭಿನಯದ ‘ಅಮರನ್’ ಸಿನಿಮಾ ಅಕ್ಟೋಬರ್ 31 ರಂದು ಥಿಯೇಟರ್ನಲ್ಲಿ ಬಿಡುಗಡೆಯಾಗಿ ಜನರ ಮನಸ್ಸು ಗೆದ್ದಿದೆ.
ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾದ ಚಿತ್ರಕ್ಕೆ ಸೂಪರ್ ಹಿಟ್ ರೆಸ್ಪಾನ್ಸ್ ಸಿಕ್ಕಿದೆ. ಅಮರನ್ ನೋಡಿದ ಅನೇಕ ಸೆಲೆಬ್ರಿಟಿಗಳು ಹಾಗೂ ರಾಜಕಾರಣಿಗಳು ಕೂಡ ಚಿತ್ರವನ್ನು ಮೆಚ್ಚಿಕೊಂಡು ಕೊಂಡಿದ್ದಾರೆ.
ಅಮರನ್ ಚಿತ್ರಕ್ಕೆ ನಿರ್ದೇಶಕ ರಾಜಕುಮಾರ್ ಪೆರಿಯಸಾಮಿ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಅಮರನ್ ಸಿನಿಮಾ ಬಾಕ್ಸ್ ಆಫೀಸ್ನಲ್ಲೂ ಬರೋಬ್ಬರಿ 300 ಕೋಟಿ ದಾಟಿದೆ ಎನ್ನಲಾಗಿದೆ. ಮೇಜರ್ ಮುಕುಂದ್ ವರದರಾಜನ್ ಅವರ ಜೀವನದ ಘಟನೆಗಳನ್ನು ಆಧರಿಸಿದ ಸಿನಿಮಾವನ್ನು ಅನೇಕರು ಕೊಂಡಾಡಿದ್ದಾರೆ.
ಅಮರನ್ ಸಿನಿಮಾ ಸಕ್ಸಸ್ ಖುಷಿಯಲ್ಲಿರೋ ಚಿತ್ರತಂಡ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ನಿರ್ದೇಶಕ ರಾಜ್‌ಕುಮಾರ್ ಪೆರಿಯಸಾಮಿ, ನಟ ಶಿವಕಾರ್ತಿಕೇಯನ್ ಸೇರಿದಂತೆ ಕೆಲವರು ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿದ್ರು. ರಾಜನಾಥ್ ಸಿಂಗ್ ಅವರು ಅಮರನ್ ಚಿತ್ರದ ಯಶಸ್ಸಿಗೆ ಚಿತ್ರತಂಡವನ್ನು ಅಭಿನಂದಿಸಿದರು. .
ಚಿತ್ರರಂಗದ ಗಣ್ಯರು ಮಾತ್ರವಲ್ಲದೆ, ಮುಖ್ಯಮಂತ್ರಿ ಸ್ಟಾಲಿನ್, ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್, ನಾಮ್ ತಮಿಳರ್ ಪಕ್ಷದ ಮುಖ್ಯಸ್ಥ ಸೀಮಾನ್ ಸೇರಿದಂತೆ ಹಲವು ರಾಜಕೀಯ ನಾಯಕರು ಕೂಡ ಈ ಚಿತ್ರವನ್ನು ಶ್ಲಾಘಿಸಿದ್ದಾರೆ.