ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮರನಾಥ ಮೇಘ ಸ್ಫೋಟದಲ್ಲಿ ಸಾವನ್ನಪ್ಪಿದ ಯಾತ್ರಿಕರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಭಾರತೀಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಅರಮನಾಥ ಯಾತ್ರಿಕರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಯತಾತ್ರಿಗಳನ್ನು ಸ್ಥಳಾಂತರಿಸುವ ಕಾರ್ಯ ಶರವೇಗದಲ್ಲಿ ನಡೆಯುತ್ತಿದೆ.
Jammu & Kashmir | 15 dead in the Amarnath cloud burst incident. Rescue operation continues. The foot yatra has been temporarily suspended: Indian Army officials pic.twitter.com/7N5iBpftbW
— ANI (@ANI) July 9, 2022
2 ವಾಲ್ ರಾಡಾರ್ ಹಾಗೂ 2 ಶ್ವಾನಗಳೊಂದಿಗೆ ಭಾರತೀಯ ಸೇನೆ, ಹೆಲಿಕಾಪ್ಟರ್‌ಗಳ ಮೂಲಕ ರಕ್ಷಣಾ ಕಾರ್ಯಾಚರಣೆಗಾಗಿ ಪವಿತ್ರ ಗುಹೆ ಬಳಿ ತೆರಳಿವೆ. ಇಂದು ಬೆಳಗ್ಗೆ ವಾಯು ರಕ್ಷಣಾ ಕಾರ್ಯಾಚರಣೆಯ ಭಾಗವಾಗಿ 6 ಯಾತ್ರಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ. ನೀಲಗ್ರಾರ್ ಹೆಲಿಪ್ಯಾಡ್‌ನಲ್ಲಿ ವೈದ್ಯಕೀಯ ಸಿಬ್ಬಂದಿ ಬೀಡುಬಿಟ್ಟಿದ್ದು, ಸೇನಾ ಸಿಬ್ಬಂದಿ ಕಾಣೆಯಾದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಸೋನಾಮಾರ್ಗ್‌ನ ಬಾಲ್ಟಾಲ್ ಬೇಸ್ ಕ್ಯಾಂಪ್‌ನಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಅಮರನಾಥ ಗುಹೆಯಲ್ಲಿ ಹವಾಮಾನವು ಸ್ಪಷ್ಟವಾಗಿಲ್ಲದ ಕಾರಣ ಟೆಂಟ್‌ಗಳಲ್ಲೇ ಉಳಿದುಕೊಳ್ಳಲು ಸೂಚನೆ ನೀಡಲಾಗಿದೆ.
ಭಾರತೀಯ ವಾಯುಪಡೆಯ ಎಂಐ-17 ಹೆಲಿಕಾಪ್ಟರ್‌ಗಳು ಅಮರನಾಥ ಗುಹೆಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಶ್ರೀನಗರದಿಂದ ಹೊರಟಿವೆ. ಶ್ರೀನಗರ ಮತ್ತು ಪಕ್ಕದ ಪ್ರದೇಶಗಳಲ್ಲಿ ಕೆಟ್ಟ ಹವಾಮಾನದಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗುತ್ತಿರುವುದಾಗಿ ವಾಯು ಸೇನಾಧಿಕಾರಿಗಳು ತಿಳಿಸಿದ್ದಾರೆ.