ಭಾರತ ಮೂಲದ ಖ್ಯಾತ ಭರತನಾಟ್ಯ ಕಲಾವಿದ ಅಮರನಾಥ್ ಘೋಷ್ ಗುಂಡೇಟಿಗೆ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕದಲ್ಲಿ ಮತ್ತೊಬ್ಬ ಭಾರತ ಮೂಲದ ಖ್ಯಾತ ಭರತನಾಟ್ಯ ಕಲಾವಿದನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 34 ವರ್ಷದ ಅಮರನಾಥ್ ಘೋಷ್, ಮೂಲತಃ ಕೋಲ್ಕತ್ತಾದವರು, ಯುಎಸ್‌ನ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಾರೆ ಮತ್ತು ವೃತ್ತಿಪರ ಭರತನಾಟ್ಯ , ಕೂಚಿಪುಡಿ ನೃತ್ಯಗಾರರಾಗಿದ್ದಾರೆ.

ಮಿಸ್ಟೋರಿಯ ಸೈಂಟ್ ಲೂಯಿಸ್ಸೆ ನಲ್ಲಿ ನೃತ್ಯ ಪ್ರದರ್ಶನದ ಸಂದರ್ಭದಲ್ಲಿ ಅವರ ಮೇಲೆ ಗುಂಡು ಹಾರಿಸಲಾಗಿದೆ ಎಂದು ಹೇಳಲಾಗಿದೆ. ಗುಂಡಿನ ದಾಳಿಯಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾರತೀಯ ಕಾನ್ಸುಲೇಟ್ ಅಧಿಕಾರಿಗಳು ಘೋಷ್ ಅವರ ಹತ್ಯೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಪೊಲೀಸರಿಗೆ ತಿಳಿಸಲಾಗಿದೆ.

ಅಮರನಾಥ್ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ಕಚೇರಿ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವೋಲೀನಾ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!