ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಡಿಎಚ್‌ಒ ಅಮರನಾಥ್‌ಗೆ ಕೋವಿಡ್ ಸೋಂಕು ದೃಢ

ದಿಗಂತ ವರದಿ ಮೈಸೂರು:

ಅರಮನೆ ನಗರಿ ಮೈಸೂರಿನ ಸರ್ಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ನೌಕರರು ಕೋವಿಡ್ ಸೋಂಕಿಗೆ ಒಳಗಾಗುತ್ತಿರುವುದು ಹೆಚ್ಚುತ್ತಿದೆ. ಇದೀಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಮರನಾಥ್ ಅವರಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಂಡು ಬಂದು ಹಿನ್ನಲೆಯಲ್ಲಿ ಅವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಇದೀಗ ಪಾಸಿಟೀವ್ ವರದಿ ಬಂದಿದೆ. ಈ ಹಿನ್ನಲೆಯಲ್ಲಿ
ಡಿಎಚ್‌ಒ ಚೇಂಬರ್ ಸೀಲ್‌ಡೌನ್ ಮಾಡಲಾಗಿದೆ. ಅವರ ಸಂಪರ್ಕದಲ್ಲಿದ್ದವರಲ್ಲಿ ಆತಂಕ ಮನೆ ಮಾಡಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss