ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮರನಾಥ ಯಾತ್ರೆಯ ಪ್ರಮುಖ ಮೂಲ ಶಿಬಿರಗಳಲ್ಲಿ ಒಂದಾಗಿರುವ ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿ ನಡೆದಿದೆ. ಈ ದಾಳಿಯಿಂದ ಅಮರನಾಥ ಯಾತ್ರೆ ನಡೆಸಲು ಯಾತ್ರಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಜಮ್ಮು ಉಪ ಮುಖ್ಯಮಂತ್ರಿ ಸುರೀಂದರ್ ಚೌಧರಿ ಉತ್ತರಿಸಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಅಮರನಾಥ ಯಾತ್ರೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.
ಅಮರನಾಥ ಯಾತ್ರೆ ಒಂದು ಧಾರ್ಮಿಕ ಕಾರ್ಯಕ್ರಮ. ಅಮರನಾಥ ಯಾತ್ರೆಗೆ ಬರಲು ಬಯಸುವವರು ಸ್ವಂತ ಇಚ್ಛೆಯಿಂದ ಬರುತ್ತಾರೆ. ಕೆಲವರು ಕೇದಾರನಾಥಕ್ಕೆ ಹೋಗುತ್ತಾರೆ. ಕೆಲವರು ಹಿಮ ಇರುವುದರಿಂದ ಹೋಗುವುದಿಲ್ಲ.ಈ ಭಯೋತ್ಪಾದಕ ದಾಳಿ ಯಾತ್ರೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಯು ಒಂದು ದೊಡ್ಡ ಘಟನೆಯಾಗಿದ್ದರೂ, ಜಮ್ಮು ಮತ್ತು ಕಾಶ್ಮೀರದ ಶ್ರೀಮಂತ ಸಂಸ್ಕೃತಿ ಹಾಗೂ ಸಂಪ್ರದಾಯದ ಅಡಿಪಾಯವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.