ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಅಮರನಾಥ ಯಾತ್ರೆ ಇದೀಗ ಮತ್ತೆ ಆರಂಭವಾಗಿದೆ.
ಮಳೆಯ ಪ್ರಮಾಣ ತಗ್ಗಿದ್ದು ಬಾಲ್ಟಾಲ್ ಬೇಸ್‌ನಿಂದ ಅಮರನಾಥ ಯಾತ್ರೆ ಮತ್ತೆ ಆರಂಭವಾಗಿದೆ. ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಇದೀಗ ಹೆಲಿಕಾಪ್ಟರ್‌ಗಳನ್ನೂ ಬಳಕೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.