ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ಅರಿಶಿನ ಆಯುರ್ವೇದ ಹಾಗೂ ಅಡುಗೆಯಲ್ಲಿ ಬಹಳ ಪ್ರಾಮುಖ್ಯತೆಯನ್ನು ಪಡೆದಿದೆ. ಪ್ರಾಚೀನ ಕಾಲದಿಂದಲೂ ಇದು ಅನೇಕ ಚಿಕಿತ್ಸೆಗಳಲ್ಲಿ ಪ್ರಯೋಜನಕಾರಿಯಾಗಿ ಬಳಸಲ್ಪಟ್ಟಿದೆ. ವಿಶೇಷವಾಗಿ ಚರ್ಮದ ಆರೈಕೆಯಲ್ಲಿ ಬಳಸಲಾಗುತ್ತದೆ. ಮುಂಜಾನೆ ಖಾಲಿ ಹೊಟ್ಟೆಗೆ ನೀರಿನಲ್ಲಿ ಅರಿಶಿನವನ್ನು ಬೆರೆಸಿ ಸೇವಿಸುವುದರಿಂದ ವಿವಿಧ ರೋಗಗಳ ಚಿಕಿತ್ಸೆಯಲ್ಲಿ ಸಹಾಯವಾಗುತ್ತದೆ.
ಅರಿಶಿನ ನೀರನ್ನು ಕುಡಿಯುವುದರಿಂದ ಆಗುವ ಪ್ರಯೋಜನಗಳು
ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ; ಖಾಲಿ ಹೊಟ್ಟೆಯಲ್ಲಿ ಅರಿಶಿನ ನೀರು ಕುಡಿಯುವುದರಿಂದ ಜೀರ್ಣಕಾರಿ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಗುಣಪಡಿಸುತ್ತದೆ.
ತೂಕ ನಷ್ಟ; ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವಾಗ ದೇಹವು ಕೊಬ್ಬನ್ನು ವೇಗವಾಗಿ ಸುಡಲು ಸಹಾಯ ಮಾಡುತ್ತದೆ.
ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ; ಅನಾರೋಗ್ಯದ ನಂತರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕೆಲವು ದಿನಗಳವರೆಗೆ ಖಾಲಿ ಹೊಟ್ಟೆಯಲ್ಲಿ ಅರಿಶಿನ ನೀರನ್ನು ಕುಡಿಯಲು ಸೂಚಿಸಲಾಗುತ್ತದೆ.
ಉರಿಯೂತ ಕಡಿಮೆ ಮಾಡುತ್ತದೆ; ಬೆಳಿಗ್ಗೆ ಅರಿಶಿನ ನೀರನ್ನು ಕುಡಿಯುವುದರಿಂದ ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಬಹುದು.
ಅಧಿಕ ಕೊಲೆಸ್ಟ್ರಾಲ್, ಮಧುಮೇಹ, ಅಧಿಕ ರಕ್ತದೊತ್ತಡ, ಬೊಜ್ಜು ಅಥವಾ ಮಧುಮೇಹದಂತಹ ಯಾವುದೇ ರೀತಿಯ ಚಯಾಪಚಯ ಅಸ್ವಸ್ಥತೆಯಿಂದ ಬಳಲುತ್ತಿದ್ದರೆ ಅರಿಶಿನ ನೀರನ್ನು ಆಗಾಗ್ಗೆ ಕುಡಿಯುವುದು ಪ್ರಯೋಜನಕಾರಿ.