ಆಂಧ್ರದ ಅಮೇಜಾನ್‌ ಗೋದಾಮಿನಲ್ಲಿ ಅಗ್ನಿ ಅವಘಡ: 10ಲಕ್ಷ ರೂ. ಮೌಲ್ಯದ ಉತ್ಪನ್ನಗಳು ಬೆಂಕಿಗಾಹುತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿರುವ ಅಮೆಜಾನ್ ಸಂಗ್ರಹಣಾ ಘಟಕದಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. 10 ಲಕ್ಷ ಮೌಲ್ಯದ ಉತ್ಪನ್ನಗಳು ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸರು ತಿಳಿಸಿರುವುದಾಗಿ ಮೂಲಗಳು ವರದಿ ಮಾಡಿವೆ.

ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ಕುಪ್ಪಂ ಬಡಾವಣೆಯಲ್ಲಿರುವ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎನ್ನಲಾಗಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!