ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ನಟ ಅಂಬರೀಶ್ ಹುಟ್ಟುಹಬ್ಬವನ್ನುಅಭಿಮಾನಿಗಳು ಮತ್ತು ಅವರ ಕುಟುಂಬ ಅರ್ಥಪೂರ್ಣವಾಗಿ ಆಚರಿಸುತ್ತಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋದ ಅಂಬಿ ಸಮಾಧಿಗೆ ಕುಟುಂಬದವರು ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗೆ ಅಂಬರೀಶ್ ಸಮಾಧಿ ಬಳಿ ಆಗಮಿಸಿದ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮತ್ತು ಅಸಂಖ್ಯಾತ ಅಭಿಮಾನಿಗಳು ಸಮಾಧಿಗೆ ಪೂಜೆ ಸಲ್ಲಿಸಿದರು.
ಅಭಿಮಾನಿಗಳು ಕೂಡ ತಮ್ಮ ನೆಚ್ಚಿನ ನಟನ ಸಮಾಧಿಗೆ ಪೂಜೆ ಸಲ್ಲಿಸಿದ್ದು, ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.