ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ವೈಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಹತ್ತೇ ದಿನದಲ್ಲಿ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಪಕ್ಷ ತೊರೆದು ರಾಜಕೀಯದಿಂದ ವಿರಾಮ ತೆಗೆದುಕೊಂಡಿದ್ದಾರೆ.
ನಾನು ವೈಎಸ್‌ಆರ್‌ಸಿಪಿ ತೊರೆದಿದ್ದೇನೆ. ಸ್ವಲ್ಪ ಸಮಯ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸುತ್ತಿದ್ದೇನೆ, ಮುಂದಿನ ನಡೆ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ರಾಯುಡು ಹೇಳಿಕೊಂಡಿದ್ದಾರೆ.
ಹತ್ತು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ ರೆಡ್ಡಿ ಸಮ್ಮುಖದಲ್ಲಿ ಅಂಬಟಿ ತಿರುಪತಿ ರಾಯುಡು ಪಕ್ಷಕ್ಕೆ ಸೇರಿದ್ದರು.