ಹೊಸದಿಗಂತ ವರದಿ ಕಲಬುರಗಿ:
ನಗರದ ಹೊರವಲಯದ ಕೋಟನೂರ (ಡಿ) ಗ್ರಾಮದಲ್ಲಿ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರ ಮೂರ್ತಿಗೆ ಅಪಮಾನ ಮಾಡಿರುವ ಘಟನೆಗೆ ಸಂಬಂಧಪಟ್ಟಂತೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ಗುನ್ನೆ ನಂ. 18/24 ಕಲಂ 295 ಐ.ಪಿ.ಸಿ ಹಾಗೂ 3(1)(U)(V)(T) SC/ST Act ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಸೂಕ್ತ ತನಿಖೆಯ ನಂತರ 4 ಜನ ಆಪಾದಿತರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಚೇತನ್ ಆರ್ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಜನ ಆರೋಪಿಗಳನ್ನು ಬಂಧಿಸಿ,ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಕಾರಣ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಶಾಂತತೆಯನ್ನು ಕಾಪಾಡಲು ಕೋರಲಾಗಿದೆ ಎಂದು ಹೇಳಿದರು.
ಆಪೋಪಿಗಳಾದ ಕಿರಣ (26), ಹಣಮಂತ (25), ಮಾನು (31) ಹಾಗೂ ಸಂಗಪ್ಪಾ (38) ಎಂಬುವವರನ್ನು ಬಂಧನ ಮಾಡಿ, ನ್ಯಾಯಾಂಗ ಒಪ್ಪಿಸಲಾಗಿದೆ ಎಂದು ಹೇಳಿದರು.