ವೈದ್ಯರ ಅನುಪಸ್ಥಿತಿಯಲ್ಲಿ ರೋಗಿಗೆ ಇಂಜೆಕ್ಷನ್ ಚುಚ್ಚಿದ ಆಯಂಬುಲೆನ್ಸ್ ಚಾಲಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರೋಗಿಯೊಬ್ಬರಿಗೆ ವೈದ್ಯರ ಅನುಪಸ್ಥಿತಿಯಲ್ಲಿ ಆಯಂಬುಲೆನ್ಸ್ ಚಾಲಕನೇ ಇಂಜೆಕ್ಷನ್ ಚುಚ್ಚಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.

ಉತ್ತರ ಪ್ರದೇಶದ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿರುವ ರೋಗಿಗೆ ಆಂಬ್ಯುಲೆನ್ಸ್ ಚಾಲಕ ಇಂಜೆಕ್ಷನ್ ನೀಡುತ್ತಿರುವ ವಿಡಿಯೋವೊಂದ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಇಆರೋಗ್ಯ ಇಲಾಖೆ ಅಧಿಕಾರಿಗಳಿಂದ ಸ್ಪಷ್ಟನೆ ಕೇಳಿದ್ದಾರೆ.

ಮೂಲಗಳ ಪ್ರಕಾರ ಈ ಘಟನೆ ಬುಧವಾರ ರಾತ್ರಿ ನಡೆದಿದೆ ಎನ್ನಲಾಗಿದೆ. ಈ ವಿಡಿಯೋ ವೈರಲ್ ಬೆನ್ನಲ್ಲೇ ವಿಷಯದ ಕುರಿತು ಅರಿತ ಅಧಿಕಾರಿಗಳು ತುರ್ತು ಚಿಕಿತ್ಸಾ ಕೊಠಡಿಯ ಪ್ರಭಾರಿ ವೈದ್ಯಾಧಿಕಾರಿ, ವೈದ್ಯರು ಮತ್ತು ಅಲ್ಲಿ ನಿಯೋಜಿಸಲಾದ ಇತರ ವೈದ್ಯಕೀಯ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲು ಅವರ ತಕ್ಷಣದ ಸ್ಪಷ್ಟೀಕರಣವನ್ನು ಕೋರಿ ನೋಟಿಸ್ ನೀಡಿದ್ದಾರೆ. ಅಂತೆಯೇ ಈ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡುಬಂದ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ (ಸಿಎಂಎಸ್) ಡಾ.ದಿವಾಕರ್ ಸಿಂಗ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!