ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಬುಲೆನ್ಸ್ ಚಾಲಕನೊಬ್ಬ ವಾಹನದ ಬ್ರೇಕ್ ಫೇಲ್ ಆಗಿದ್ರೂ ಗರ್ಭಿಣಿ ಮಹಿಳೆಯೊಬ್ಬರನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ತಲುಪಿಸಿದ ಘಟನೆ ನಡೆದಿದೆ.
ಮಡಿಕೇರಿಯಿಂದ ಬೆಂಗಳೂರಿನ ಇಂದಿರಾ ಗಾಂಧಿ ಆಸ್ಪತ್ರೆಗೆ ಗರ್ಭಿಣಿ ಮಹಿಳೆಯನ್ನ ಕರೆದೊಯ್ಯುವಾಗ ವಾಹನದ ಹಿಂದಿನ ಚಕ್ರ ಬ್ಲಾಕ್ ಆಗಿ ಬ್ರೇಕ್ ಫೇಲ್ ಆಗಿತ್ತು. ಆದಾಗ್ಯೂ ಅಂಬುಲೆನ್ಸ್ ಚಾಲಕ ಮಹಿಳೆಯನ್ನ ಸುರಕ್ಷಿತವಾಗಿ ಆಸ್ಪತ್ರೆಗೆ ತಲುಪಿಸಿದ್ದಾರೆ. ಜೊತೆಗೆ ಹಿಂದಿರುಗಿ ಬರುವಾಗ ರಸ್ತೆ ಅಪಘಾತದಲ್ಲಿ ಹೆಡ್‌ಇಂಜುರಿ ಆಗಿ ಬಳಲುತ್ತಿದ್ದ ವ್ಯಕ್ತಿಯೊಬ್ಬರನ್ನ ಬಿಳಿಕೆರೆಯಿಂದ ಹುಣಸೂರು ಆಸ್ಪತ್ರೆಗೆ ಸಾಗಿಸಿ ಸಾಹಸ ಮೆರೆದಿದ್ದಾರೆ.
ಚಾಲಕನ ಬಿ.ಎಸ್ ವೆಂಕಟೇಶ್ (ಕಿಶೋರ್ ಪೂಜಾರಿ) ಸಾಹಸಕ್ಕೆ ಕೊಡಗಿನಾದ್ಯಂತ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವೆಂಕಟೇಶ್ ಸದ್ಯ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.