ಹೊಸದಿಗಂತ ವರದಿ ವಿಜಯಪುರ:
ದುಷ್ಕರ್ಮಿಗಳಿಂದ ಯುವಕನೊಬ್ಬ ಭೀಕರ ಹತ್ಯೆಯಾಗಿರುವ ಘಟನೆ ನಗರದಲ್ಲಿ ಬೆಳಗ್ಗೆ ನಡೆದಿದೆ.
ಮೃತಪಟ್ಟವನನ್ನು ಅಲ್ತಾಫ್ ಮನಗೂಳಿ ಎಂದು ಗುರುತಿಸಲಾಗಿದೆ. ಅಲ್ತಾಫ್ ಮನಗೂಳಿ ಈತ ಕಳ್ಳತನ ಸೇರಿದಂತೆ ಇತರೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಇಲ್ಲಿನ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಎಂ.ಓ.ಬಿ.ಆಗಿದ್ದ.
ಘಟನಾ ಸ್ಥಳಕ್ಕೆ ಗಾಂಧಿಚೌಕ್ ಪೊಲೀಸ್ ಠಾಣಾ ಸಿಪಿಐ ಹಾಗೂ, ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನಾ ಸ್ಥಳದಿಂದ ಶವ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



