ಬಿಜೆಪಿ ತಂದಿದ್ದ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ 2020ಕ್ಕೆ ತಿದ್ದುಪಡಿ: ಸಿ.ಎಂ. ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರೈತರು ನೀಡಿದ ಹಕ್ಕೊತ್ತಾಯಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ ‘ಭೂ ಸುಧಾರಣಾ ಕಾಯ್ದೆ 2020’ಕ್ಕೆ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಶವನ್ನು ಉದ್ಘಾಟಿಸಿದ ಬಳಿಕ ರೈತ ಪರ ಬಜೆಟ್ ರೂಪಿಸಲು ರೈತ ಸಂಘ ನೀಡಿದ ಹಕ್ಕೊತ್ತಾಯಗಳನ್ನು ಸ್ವೀಕರಿಸಿ ಮಾತನಾಡಿದರು.

ನಂಜುಂಡಸ್ವಾಮಿಯವರು ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಹಲವು ವಿಚಾರಗಳ ಒಳನೋಟ ದೊರೆಯಿತು. ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು. ಈ ಸ್ಟಡಿ ಸರ್ಕಲ್ ಗೆ ಬಹಳ ಮಂದಿ ಉಪನ್ಯಾಸಕರು, ಪ್ರೊಫೆಸರ್ ಗಳು, ಸಾಹಿತಿಗಳು ಬರುತ್ತಿದ್ದರು. ಇವರೆಲ್ಲರ ಮಾರ್ಗದರ್ಶನ ನನಗೆ ಅನುಕೂಲವಾಯಿತು ಎಂದರು.

ನಂಜುಂಡಸ್ವಾಮಿಯವರ ರೈತ ಹೋರಾಟ ನನಗೆ ರಾಜಕೀಯ ಪ್ರೇರಣೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!