ಅಮೆರಿಕ, ಬ್ರಿಟನ್, ಫ್ರಾನ್ಸ್, ಇಸ್ರೇಲ್: ಆಪರೇಷನ್ ಸಿಂದೂರ ಕಾರ್ಯಾಚರಣೆಗೆ ಮನಸೋತಿದ್ದಾರೆ ದಿಗ್ಗಜರು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಾಕ್ ವಿರುದ್ಧ ಭಾರತ ಕೈಗೆತ್ತಿಕೊಂಡಿರುವ ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕೆ ವಿಶ್ವದ ಹಲವು ರಾಷ್ಟ್ರಗಳು ತಮ್ಮ ಬೆಂಬಲ ವ್ಯಕ್ತಪಡಿಸಿವೆ.

ಅಮೆರಿಕ, ಬ್ರಿಟನ್, ಫ್ರಾನ್ಸ್, ಇಸ್ರೇಲ್ ಸೇರಿದಂತೆ ಹಲವು ದೇಶಗಳು ಭಾರತದ ಆಪರೇಷನ್ ಸಿಂದೂರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದು, ಉಗ್ರವಾದದ ದಮನಕ್ಕೆ ಭಾರತ ಕೈಗೊಂಡಿರುವ ಕ್ರಮ ಸರಿ ಎಂದು ಹೇಳಿವೆ.

ಈ ನಡುವೆ ಗುರುವಾರ ಭಾರತಕ್ಕೆ ಅನಿರೀಕ್ಷಿತ ಭೇಟಿ ನೀಡಿದ್ದ ಸೌದಿ ಅರೇಬಿಯಾದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಅಡೆಲ್ ಅಲ್ಟುಬೈರ್, ಉಗ್ರವಾದ ನಿಗ್ರಹಕ್ಕೆ ತಮ್ಮ ಬೆಂಬಲ ಘೋಷಿಸಿದ್ದಾರೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಮಾತನಾಡಿದ ಅವರು, ಭಾರತ ಮತ್ತು ಪಾಕ್ ನಡುವಿನ ಉದ್ವಿಗ್ನತೆ ಕಡಿಮೆ ಮಾಡುವ ಬಗ್ಗೆ ಕೂಡಾ ಮಾತುಕತೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here