ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶ ಬಿಕ್ಕಟ್ಟಿನಲ್ಲಿ ಅಮೆರಿಕದ ಯಾವುದೇ ಪಾತ್ರವಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಬಾಂಗ್ಲಾದೇಶದ ಬಗ್ಗೆ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ಶೇಖ್ ಹಸೀನಾ ಸರ್ಕಾರದ ಪತನದ ನಂತರ ಬಾಂಗ್ಲಾದೇಶದಲ್ಲಿ ಅವ್ಯವಸ್ಥೆ ಮುಂದುವರೆದಿದೆ. ಇಸ್ಲಾಮಿಕ್ ದೇಶಗಳಲ್ಲಿ ಜಿಹಾದಿ ಶಕ್ತಿಗಳು ತಲೆ ಎತ್ತಲು ಪ್ರಾರಂಭಿಸಿವೆ, ಇದರಿಂದಾಗಿ ಅಂತಾರಾಷ್ಟ್ರೀಯ ಬೆದರಿಕೆ ಎದುರಾಗಿದೆ. ಹಿಂದಿನ ಬೈಡನ್ ಆಡಳಿತವು ಈ ನಿಲುವನ್ನು ಬೆಂಬಲಿಸಿದ್ದರಿಂದ ಇದು ಡೊನಾಲ್ಡ್ ಟ್ರಂಪ್ ಅವರ ವಿದೇಶಾಂಗ ನೀತಿಗೆ ಸವಾಲಾಗಿ ಪರಿಣಮಿಸಿದೆ.
ಬಾಂಗ್ಲಾದೇಶದ ಬಿಕ್ಕಟ್ಟಿನಲ್ಲಿ ಅಮೆರಿಕದ ಪಾತ್ರ ಏನೂ ಇಲ್ಲ, ಈ ವಿಷಯವನ್ನು ಪ್ರಧಾನಿ ಮೋದಿ ನಿರ್ವಹಿಸುತ್ತಾರೆ, ನಾನು ಬಾಂಗ್ಲಾದೇಶವನ್ನು ಮೋದಿಗೆ ಬಿಡುತ್ತೇನೆ ಎಂದು ಟ್ರಂಪ್ ಸ್ಪಷ್ಟನೆ ನೀಡಿದ್ದಾರೆ.