April 13, 2026
Monday, April 13, 2026
spot_img

ಮೊಜ್ತಾಬಾ ಖಮೇನಿ ಬಗ್ಗೆ ಮಾಹಿತಿ ಕೊಟ್ರೆ $10 ಮಿಲಿಯನ್ ಬಹುಮಾನ ಕೊಡ್ತೇವೆ ಎಂದ ಅಮೆರಿಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಡುವೆಯೇ ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ.

ಹೌದು! ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಸೇರಿದಂತೆ ಪ್ರಮುಖ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡುವವರಿಗೆ 10 ಮಿಲಿಯನ್ ಡಾಲರ್‌ (ಸುಮಾರು 83 ಕೋಟಿ) ಬಹುಮಾನ ನೀಡುವುದಾಗಿ ಅಮೆರಿಕದ ವಿದೇಶಾಂಗ ಇಲಾಖೆ ಘೋಷಿಸಿದೆ.

ಈ ಬಹುಮಾನವನ್ನು “ರಿವಾರ್ಡ್ಸ್ ಫಾರ್ ಜಸ್ಟೀಸ್” ಯೋಜನೆಯಡಿ ಘೋಷಿಸಲಾಗಿದೆ. ಅಮೆರಿಕದ ಪ್ರಕಾರ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಜಾಗತಿಕ ಮಟ್ಟದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ರೂಪಿಸಿ ನಡೆಸುತ್ತಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:

ಬಹುಮಾನ ಪಟ್ಟಿಯಲ್ಲಿ ಮೊಜ್ತಾಬಾ ಖಮೇನಿ ಜೊತೆಗೆ ಇರಾನ್‌ನ ಆಂತರಿಕ ಸಚಿವ ಎಸ್ಕಂದರ್ ಮೊಮೆನಿ, ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ಹಾಗೂ ರಾಷ್ಟ್ರೀಯ ಭದ್ರತಾ ಮಂಡಳಿಯ ಮುಖ್ಯಸ್ಥ ಅಲಿ ಲಾರಿಜಾನಿ ಸೇರಿದಂತೆ ಹಲವರು ಸೇರಿದ್ದಾರೆ. ಈ ಅಧಿಕಾರಿಗಳ ಬಗ್ಗೆ ನಿಖರ ಮಾಹಿತಿ ನೀಡುವವರಿಗೆ ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ಇತ್ತೀಚಿನ ದಾಳಿಗಳ ನಂತರ ಮೊಜ್ತಾಬಾ ಖಮೇನಿ ಗಾಯಗೊಂಡಿದ್ದಾರೆ ಎಂಬ ವರದಿಗಳೂ ಹರಿದಾಡುತ್ತಿವೆ. ಅವರ ತಂದೆ ಅಲಿ ಖಮೇನಿ ಸಾವಿನ ಬಳಿಕ ಅವರು ನಾಯಕತ್ವ ವಹಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅಮೆರಿಕದ ಈ ಘೋಷಣೆ ಪಶ್ಚಿಮ ಏಷ್ಯಾದ ರಾಜಕೀಯ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಬಹುದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !