ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿದ ಅಮೆರಿಕ ಸುಪ್ರಸಿದ್ಧ ಗಾಯಕಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ಭೇಟಿಯ ಸಮಾರೋಪ ಸಮಾರಂಭದ ಅಂಗವಾಗಿ ಅಮೆರಿಕದ ಖ್ಯಾತ ಗಾಯಕಿ ಮೇರಿ ಮಿಲ್ಬೆನ್ ಅವರು ಶನಿವಾರ ಭಾರತದ ರಾಷ್ಟ್ರಗೀತೆ ಜನಗಣಮನವನ್ನು ಹಾಡಿದರು. ನಂತರ ಮೇರಿ ಮಿಲ್ಬೆನ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಾದ ಮುಟ್ಟಿ ಆಶೀರ್ವಾದ ಪಡೆದರು.

38ರ ಹರೆಯದ ಮಿಲ್ಬೆನ್ ಅವರು ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ಬಿಲ್ಡಿಂಗ್ ಮತ್ತು ಇಂಟರ್ ನ್ಯಾಷನಲ್ ಟ್ರೇಡ್ ಸೆಂಟರ್ ನಲ್ಲಿ ಯುನೈಟೆಡ್ ಸ್ಟೇಟ್ಸ್ ಇಂಡಿಯನ್ ಕಮ್ಯುನಿಟಿ ಫೌಂಡೇಶನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತದ ರಾಷ್ಟ್ರಗೀತೆ ಹಾಡಿದರು. ಪ್ರಸಿದ್ಧ ಆಫ್ರಿಕನ್-ಅಮೇರಿಕನ್ ಹಾಲಿವುಡ್ ನಟಿ ಮತ್ತು ಗಾಯಕಿ ಮೇರಿ ಮಿಲ್ಬೆನ್ ಅವರು ತಮ್ಮ ರಾಷ್ಟ್ರಗೀತೆಯನ್ನು ಜನ ಗಣ ಮನ, ಓಂ ಜೈ ಜಗದೀಶ ಹರೇ ಹಾಡುವುದರೊಂದಿಗೆ ಭಾರತದಲ್ಲಿ ಬಹಳ ಜನಪ್ರಿಯರಾದರು.

ಪ್ರಧಾನಿ ಮೋದಿಯವರಿಗಾಗಿ ಭಾರತದ ರಾಷ್ಟ್ರಗೀತೆಯನ್ನು ಹಾಡಿದ್ದಕ್ಕೆ ನನಗೆ ಗೌರವವಿದೆ ಎಂದು ಮೇರಿ ಪ್ರತಿಕ್ರಿಯಿಸಿದ್ದಾರೆ. ಅಮೆರಿಕನ್ ಮತ್ತು ಭಾರತೀಯ ಗೀತೆಗಳು ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯದ ಆದರ್ಶಗಳನ್ನು ವ್ಯಕ್ತಪಡಿಸುತ್ತವೆ. ಇದು ಯುಎಸ್-ಭಾರತದ ಸಂಬಂಧಗಳ ನಿಜವಾದ ಸಾರವಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!