ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿದ ಬೆನ್ನಲ್ಲೇ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕಾಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಅಮೆರಿಕನ್ನರು ಭೀಕರ ಹಾಗೂ ಹೆಚ್ಚಿನ ಹಾನಿ ಉಂಟುಮಾಡಬಲ್ಲ ದಾಳಿಯನ್ನು ಎದುರಿಸಲು ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರತಿನಿಧಿ ಹೊಸೈನ್ ಶರಿಯತ್ಮದಾರಿ, ಒಂದೂ ಕ್ಷಣವೂ ತಡಮಾಡದೇ ಪ್ರತೀಕಾರದ ದಾಳಿ ನಡೆಸಲು ಸೂಚನೆ ನೀಡುವಂತೆ ಒತ್ತಾಯಿಸಿದ್ದಾರೆ.
ಈಗ ಯಾವುದೇ ವಿಳಂಬವಿಲ್ಲದೇ ಕಾರ್ಯನಿರ್ವಹಿಸುವ ಸರದಿ ನಮ್ಮದಾಗಿದೆ. ಮೊದಲ ಹೆಜ್ಜೆಯಾಗಿ ನಾವು ಬಹ್ರೇನ್ನಲ್ಲಿರುವ ಯುಎಸ್ ನೌಕಾಪಡೆಯ ಮೇಲೆ ಕ್ಷಿಪಣಿ ದಾಳಿ ಮಾಡಬೇಕು. ನಿರ್ಣಾಯಕ ಮಿಲಿಟರಿ ಕ್ರಮ ಕೈಗೊಳ್ಳಬೇಕು ಎಂದು ಖಮೇನಿ ಅವರಿಗೆ ಪ್ರತಿನಿಧಿ ಸಲಹೆ ನೀಡಿದ್ದಾರೆ.