ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದ ಸಂಘರ್ಷ ಒಂದು ಹಂತಕ್ಕೆ ತಲುಪಿದ್ದು, ಇದರ ಮದ್ಯೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಹಾಡಿ ಹೊಗಳಿದ್ದು, ನಾವಿಬ್ಬರೂ ಕೆಲಸ ಮಾಡಿ ಮುಗಿಸುವಲ್ಲಿ ನಂಬಿಕೆ ಇರುವ ವ್ಯಕ್ತಿಗಳು ಎಂದು ಬಣ್ಣಿಸಿದ್ದಾರೆ.
ಈ ಕುರಿತು ಟ್ರಂಪ್ ಅವರ ಸಂದೇಶವನ್ನು ದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಹಂಚಿಕೊಂಡಿದ್ದು , ಭಾರತದೊಂದಿಗಿನ ನಮ್ಮ ಸಂಬಂಧ ಅದ್ಭುತವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಗಟ್ಟಿಯಾಗಲಿದೆ. ಪ್ರಧಾನಿ ಮೋದಿ ಮತ್ತು ನಾನು ಕೆಲಸಗಳನ್ನು ಮಾಡಿ ಮುಗಿಸುವ ವ್ಯಕ್ತಿಗಳು, ಈ ಕುರಿತು ಹೆಚ್ಚಿನವರಿಗೆ ಹೇಳಲಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಈ ವಾರದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋನ್ ಮೂಲಕ ಪ್ರಸುತ್ತ ಸ್ಥಿತಿಗತಿಯ ಕುರಿತು ಚರ್ಚೆ ನಡೆಸಿದ್ದರು.



