ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಅಮೆರಿಕಾ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ (75) ಅನಾರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ದಕ್ಷಿಣ ಕ್ಯಾಲಿಫೋರ್ನಿಯಾದ ಇರ್ವಿನ್ನಲ್ಲಿರುವ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಕೊರೋನಾ ಹೊರತಾದ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಏಂಜೆಲ್ ಅರೇನಾ ಟ್ವೀಟ್ ಮಾಡಿದ್ದಾರೆ.
ಬಿಲ್ ಅವರನ್ನು ಮಂಗಳವಾರ ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಆರೋಗ್ಯದಲ್ಲಿ ಚೇತರಿಕೆ ಇದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
2004ರಲ್ಲಿ ಕ್ಲಿಂಟನ್ ಅವರಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿತ್ತು. ಆದರೆ ಈಗ ಮತ್ತೆ ಅವರಿಗೆ ಇದ್ಯಾವ ಸಮಸ್ಯೆಯೂ ಇಲ್ಲ ಎಂದು ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ.