ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರಿ ನಿರ್ದೇಶನಾಲಯ ಈಗಾಗಲೇ ಮೂರು ಬಾರಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ಗೆ ನೊಟೀಸ್ ನೀಡಿದೆ. ಆದರೆ ಮೂರು ಬಾರಿಯೂ ಕೇಜ್ರಿವಾಲ್ ಗೈರಾಗಿದ್ದು, ಬಂಧನದ ಭೀತಿ ಎದುರಾಗಿದೆ ಎನ್ನಲಾಗಿದೆ.
ಈ ಮಧ್ಯೆ ಕೇಜ್ರಿವಾಲ್ ಮೂರು ದಿನಗಳ ಗುಜರಾತ್ ಪ್ರವಾಸ ಕೈಗೊಂಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಭೇಟಿ ಇದಾಗಿದೆ.
ಕಳೆದ ವರ್ಷ ನವೆಂಬರ್ 2, ಡಿಸೆಂಬರ್ 18 ಹಾಗೂ ಜನವರಿ 3 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಕೇಜ್ರಿವಾಲ್ ವಿಚಾರಣೆಗೆ ಗೈರಾಗಿದ್ದಾರೆ.