ಮಾನನಷ್ಟ ಮೊಕದ್ದಮೆ ಕೇಸ್‌ನಲ್ಲಿ ರಾಹುಲ್ ತಪ್ಪಿತಸ್ತ ತೀರ್ಪು ಹಿನ್ನೆಲೆ, ಇಂದು ಕಾಂಗ್ರೆಸ್ ತುರ್ತು ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶುಕ್ರವಾರ ಸಂಜೆ ರಾಷ್ಟ್ರ ರಾಜಧಾನಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ತನ್ನ ಸ್ಟೀರಿಂಗ್ ಕಮಿಟಿ ಸದಸ್ಯರು, ಪಿಸಿಸಿ ಅಧ್ಯಕ್ಷರು, ಸಿಎಲ್‌ಪಿ ನಾಯಕರು ಮತ್ತು ಮುಖ್ಯಸ್ಥರ ತುರ್ತು ಸಭೆಯನ್ನು ಕರೆದಿದೆ. ಪಕ್ಷದ ಅಧ್ಯಕ್ಷ ಖರ್ಗೆ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಮಾನನಷ್ಟ ಮೊಕದ್ದಮೆಯಲ್ಲಿ ಸಂಸದ ರಾಹುಲ್ ಗಾಂಧಿ ಅವರನ್ನು ಸೂರತ್ ನ್ಯಾಯಾಲಯ ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆ ತೀರ್ಪು ನೀಡಿದ್ದರಿಂದ ಕಾಂಗ್ರೆಸ್ ಪಕ್ಷ ಇಂದು ಬೃಹತ್ ಪ್ರತಿಭಟನೆಯನ್ನು ಯೋಜಿಸಿದೆ. ಇಂದು ಇಲ್ಲಿನ ವಿಜಯ್ ಚೌಕ್‌ನಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದೆ.

ಈ ವಿಷಯದ ಬಗ್ಗೆ ಇತರ ಪಕ್ಷಗಳೊಂದಿಗೆ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ಯೋಜಿಸಲಾಗಿದೆ ಎಂದು ಪಕ್ಷ ಹೇಳಿದೆ.
ಎರಡನೇ ಹಂತದ ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವ ನಿರೀಕ್ಷೆಯಿದೆ. ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ತೀರ್ಪಿನ ವಿರುದ್ಧ ಪ್ರತಿಭಟನಾ ಮೆರವಣಿಗೆಗೆ ಕಾಂಗ್ರೆಸ್ ಕರೆ ನೀಡಿದ ನಂತರ ವಿಜಯ್ ಚೌಕ್‌ನಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು.

“ಮುಖ್ಯ ಸಮಸ್ಯೆಯನ್ನು ಬದಿಗೊತ್ತಲು ಅವರು (ಬಿಜೆಪಿ) ಈ ರೀತಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಯಾವಾಗಲೂ ಒಬಿಸಿ, ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಪರವಾಗಿ ನಿಂತಿದೆ ಮತ್ತು ಅವರಿಗಾಗಿ ಹೋರಾಡಿದೆ” ಎಂದು ಖರ್ಗೆ ಮಾತನಾಡಿದರು.

ಗುರುವಾರ ಸೂರತ್ ಜಿಲ್ಲಾ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ನಂತರ ನ್ಯಾಯಾಲಯವು ಅವರಿಗೆ 30 ದಿನಗಳವರೆಗೆ ಜಾಮೀನು ನೀಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!