ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಭೈರತಿ ರಣಗಲ್ ಚಿತ್ರ ಶುಕ್ರವಾರ ತೆರೆಕಂಡಿದ್ದು, ಭರ್ಜರಿ ಓಪನಿಂಗ್ ಪಡೆದುಕೊಂಡಿದೆ.
ಚಿತ್ರದ ಕುರಿತು ದೊಡ್ಮನೆ ಅಭಿಮಾನಿಗಳು ಖುಷಿಯಾಗಿದ್ದು, ಚಿತ್ರ ಸೂಪರ್ ಹಿಟ್ ಎಂಬ ಟಾಕ್ ಬರುತ್ತಿದೆ.ಇದರ ನಡುವೆಯೇ ಶಿವಣ್ಣನ ವಿರುದ್ಧ ಕೆಲ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ.
ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರನ್ನು ನೆನಪಿಸಿಕೊಂಡಿಲ್ಲ. ದೊಡ್ಮನೆ ಕುಡಿಯನ್ನು ಅವರೇ ನೆನೆಯದೇ ಇದ್ದರೆ ಹೇಗೆ? ಎಂದು ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ.
ಈ ಕುರಿತ ವಿಡಿಯೋಗಳು ಇದೀಗ ವ್ಯಾಪಕ ವೈರಲ್ ಆಗುತ್ತಿದ್ದು, ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.