ಹೊಸದಿಗಂತ ವರದಿ ಯಲ್ಲಾಪುರ:
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಜಿಲ್ಲಾಘಟಕದ ಪದಗ್ರಹಣ ಸಮಾರಂಭ ಹಾಗೂ ಸಾಂಸ್ಕೃತಿಕ ವೈಭವ, ಉತ್ತಮ ಸೇವಾ ಸಂಸ್ಥೆ ಮತ್ತು ಕಾಯಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭವು ಭಾನುವಾರ ಪಟ್ಟಣದ ಅಡಿಕೆ ಭವನದಲ್ಲಿ ಜರುಗಿತು.
ಈ ಸಮಾರಂಭದಲ್ಲಿ ಹೊಸ ದಿಗಂತ ವರದಿಗಾರರಾದ ಪ್ರಭಾವತಿ ಜಯರಾಜ ಗೋವಿ ಅವರಿಗೆ ಕಾಯಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇವರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ‘ಕಾಯಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇದನ್ನೂ ಓದಿ:
ಈ ಸಂದರ್ಭದಲ್ಲಿ ಶಾಸಕ ಶಿವರಾಮ ಹೆಬ್ಬಾರ್, ಪ್ರಜಾಪಿತ ಬ್ರಹ್ಮಕುಮಾರಿಯ ಬಿ.ಕೆ. ಶಿವಲೀಲಾ ಅಕ್ಕ ಸೇರಿದಂತೆ ವಿವಿಧ ಗಣ್ಯರು ಹಾಜರಿದ್ದರು.



