April 23, 2026
Thursday, April 23, 2026
spot_img

ರಾಜಕೀಯ ಜಟಾಪಟಿ ನಡುವೆ ಕೋಗಿಲು ಲೇಔಟ್ ನಿರಾಶ್ರಿತರಿಗೆ ವಸತಿ ಭಾಗ್ಯ: ಮನೆ ಹಸ್ತಾಂತರಕ್ಕೆ ಡೇಟ್ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಕೋಗಿಲು ಲೇಔಟ್​ನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದವರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಕೊಡುತ್ತಿದೆ. ಇದೀಗ ಜನವರಿ 2ರಂದು ಕೋಗಿಲು ನಿರಾಶ್ರಿತರಿಗೆ ಮನೆ ಹಸ್ತಾಂತರಕ್ಕೆ ಸರ್ಕಾರ ದಿನಾಂಕ ನಿಗದಿ ಮಾಡಿದೆ.

ಕೋಗಿಲು ಸುತ್ತ ರಾಜಕೀಯ ಜಟಾಪಟಿ ಜೋರಾಗಿ ನಡೆಯುತ್ತಿದೆ. ಇದೇ ವಿಚಾರ ಮುಂದಿಟ್ಟುಕೊಂಡು ವಿಪಕ್ಷ ಬಿಜೆಪಿ ಸರ್ಕಾರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ.
ಇದರ ನಡುವೆ ಮನೆ ನೀಡಲು ಮುಂದಾಗಿದೆ.

ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆ ಅರ್ಹ ಸಂತ್ರಸ್ತರಿಗೆ ಜಿಬಿಎ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಪರ್ಯಾಯವಾಗಿ ಶಾಶ್ವತ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ. ಈಗಾಗಲೇ ಜಿಬಿಎ, ಕಂದಾಯ, ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಕೋಗಿಲಿನಲ್ಲಿ ಸರ್ವೆ ಮುಗಿಸಿದ್ದಾರೆ.

ನಿರಾಶ್ರಿತರ ಬಗ್ಗೆ ಸಮಗ್ರವಾಗಿ ದಾಖಲೆ ಪರಿಶೀಲನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಹೀಗಾಗಿ ಕಂದಾಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ಕಾರ್ಯ ನಡೆದಿದ್ದು, 2026 ಜನವರಿ 2ರಂದು ಮನೆಗಳ ಹಸ್ತಾಂತರಕ್ಕೆ ನಿರ್ಧರಿಸಲಾಗಿದೆ.

ಬಂಡೆ ಹೊಸೂರಿನ ಬೈಯಪ್ಪನಹಳ್ಳಿಯಲ್ಲಿರೋ ಅಪಾರ್ಟ್​ಮೆಂಟ್​ನಲ್ಲಿ ಸುಮಾರು 1ಸಾವಿರಕ್ಕೂ ಹೆಚ್ಚು 1 BHK ಫ್ಲ್ಯಾಟ್​ಗಳಿವೆ. ಸದ್ಯ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಸಣ್ಣಪುಟ್ಟ ಕೆಲಸಗಳಷ್ಟೇ ಬಾಕಿ ಉಳಿದಿವೆ. ಇದೇ ಅಪಾರ್ಟ್​​ಮೆಂಟ್​ನಲ್ಲಿ ನಿರಾಶ್ರಿತರಿಗೆ ಮನೆ ಕೊಡುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !