ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊರೋನಾ ಭೀತಿ ನಡುವೆ ಮತ್ತೊಂದು ವೈರಸ್ ದೆಹಲಿಯನ್ನು ಕಾಡುತ್ತಿದೆ. ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ 160 ಕೇಸ್ ಕೂಡ ದಾಖಲಾಗಿದೆ.
ಕೊರೊನಾ ಹಾವಳಿಯ ಮಧ್ಯೆ, ದೆಹಲಿಯಲ್ಲಿ ಡೆಂಗ್ಯೂ ಭೀತಿಯೂ ಹೆಚ್ಚಾಗಿದೆ. ಇತ್ತೀಚಿನ ದಾಖಲೆಯ ಮಳೆಯ ನಂತರ, ದೆಹಲಿಯಲ್ಲಿ 160 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದು ಕಳೆದ 5 ವರ್ಷಗಳಲ್ಲಿ ಎರಡನೇ ಅತಿ ಹೆಚ್ಚು ಪ್ರಕರಣಗಳು ಎಂದು ದೆಹಲಿ ವೈದ್ಯಾಧಿಕಾರಿಗಳು ಹೇಳಿದ್ದಾರೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಆರೋಗ್ಯ ಇಲಾಖೆ ಹೇಳಿಕೊಂಡರೂ, ತಜ್ಞರು ಮತ್ತು ಆಡಳಿತ ಮಂಡಳಿ ಕಳವಳ ವ್ಯಕ್ತಪಡಿಸಿದೆ.