October 1, 2026
Thursday, October 1, 2026
spot_img

ಮಧ್ಯಪ್ರಾಚ್ಯದ ಸಂಘರ್ಷದ ಕಿಚ್ಚು: 90 ಲಕ್ಷ ಭಾರತೀಯರ ಸುರಕ್ಷತೆಗೆ ಪ್ರಧಾನಿ ಮೋದಿ ಅಭಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧದ ಭೀತಿ ಹೆಚ್ಚಾಗುತ್ತಿರುವುದು ಭಾರತದ ಪಾಲಿಗೆ ಆತಂಕಕಾರಿ ವಿಷಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತೆ ಕುರಿತ ಸಂಪುಟ ಸಮಿತಿಯ ತುರ್ತು ಸಭೆ ನಡೆಸಿ, ಪರಿಸ್ಥಿತಿಯನ್ನು ಪರಾಮರ್ಶಿಸಿದ್ದಾರೆ.

ಕೊಲ್ಲಿ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ಸುಮಾರು 90 ಲಕ್ಷ ಭಾರತೀಯರ ಜೀವ ರಕ್ಷಣೆ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ.

11 ದೇಶಗಳಲ್ಲಿ ವಾಯುಪ್ರದೇಶವನ್ನು ಮುಚ್ಚಿರುವುದರಿಂದ ಸುಮಾರು 350 ಅಂತರರಾಷ್ಟ್ರೀಯ ವಿಮಾನಗಳು ರದ್ದಾಗಿವೆ. ಇದು ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಕಡಲ ವ್ಯಾಪಾರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ಇದು ಭಾರತದ ಇಂಧನ ಭದ್ರತೆ ಮತ್ತು ವಾಣಿಜ್ಯ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರಬಹುದು.

ವಿದೇಶಾಂಗ ಸಚಿವಾಲಯವು ಈಗಾಗಲೇ ಟೆಹ್ರಾನ್, ಟೆಲ್ ಅವೀವ್, ಅಬುಧಾಬಿ ಮತ್ತು ದುಬೈನಲ್ಲಿ 24/7 ಸಹಾಯವಾಣಿಗಳನ್ನು ತೆರೆದಿದೆ.

ಸಂಕಷ್ಟದಲ್ಲಿರುವ ಭಾರತೀಯ ಪ್ರಜೆಗಳಿಗೆ ನೆರವಾಗಲು ಸರ್ಕಾರಿ ಇಲಾಖೆಗಳಿಗೆ ಯುದ್ಧೋಪಾದಿಯಲ್ಲಿ ಕೆಲಸ ಮಾಡಲು ಸೂಚನೆ ನೀಡಲಾಗಿದೆ.

Must Read