ರಾಜ್ಯಕ್ಕೆ ಮತ್ತೆ ಅಮಿತ್‌ ಶಾ: ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸ

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಇಂದು ರಾತ್ರಿ 9.30ಕ್ಕೆ ಹೈದರಾಬಾದ್​ನಿಂದ ಬೆಂಗಳೂರಿಗೆ ಆಗಮಿಸಿ ರಾತ್ರಿ ರೇಸ್​ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ 8.55ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ತೆರಳಿ ನಾಳೆ ಬೆಳಗ್ಗೆ 10.30ಕ್ಕೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ದರ್ಶನ ಮಾಡಲಿದ್ದಾರೆ. ನಾಳೆ ಬೆಳಗ್ಗೆ 11.30ಕ್ಕೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಗೆ ಭೇಟಿ ನೀಡಿ ಅಲ್ಲಿ ರೋಡ್​ ಶೋ ನಡೆಸಲಿದ್ದಾರೆ. ಮಧ್ಯಾಹ್ನ 2.25ಕ್ಕೆ ಹಾಸನ ಜಿಲ್ಲೆ ಆಲೂರಿನಲ್ಲಿ ಶಾ ರೋಡ್​ಶೋ ನಡೆಸಿ ನಾಳೆ ಸಂಜೆ 4.40ಕ್ಕೆ ಹುಬ್ಬಳ್ಳಿಗೆ ತೆರಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!