ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಮಾತನಾಡಿದ ವಿಚಾರ ಕುರಿತು ಮಾತನಾಡಲು ಲೋಕಸಭೆ ಮತ್ತು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಬಿ ಆರ್ ಅಂಬೇಡ್ಕರ್ ವಿವಾದದ ಬಗ್ಗೆ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಕೆಲವೇ ನಿಮಿಷಗಳಲ್ಲಿ ಸಭೆ ನಡೆಯಿತು. ಪಕ್ಷವು ತನ್ನ ಹಲವಾರು ವರ್ಷಗಳ ದುಷ್ಕೃತ್ಯಗಳನ್ನು ಮರೆಮಾಡಬಹುದು ಎಂದು ಭಾವಿಸಿದರೆ ಅದು ಗಂಭೀರವಾಗಿ ತಪ್ಪಾಗಿದೆ ಎಂದು ಮೋದಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದರು.
ಮಂಗಳವಾರ ರಾಜ್ಯಸಭೆಯಲ್ಲಿ ಸಂವಿಧಾನದ ಚರ್ಚೆಯ ವೇಳೆ ಮಾತನಾಡಿದ ಶಾ ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ‘ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಎಂದು ಹೇಳುವುದು ಫ್ಯಾಷನ್ ಆಗಿಬಿಟ್ಟಿದೆ. ಅವರು ಇಷ್ಟು ಬಾರಿ ದೇವರ ಹೆಸರನ್ನು ತೆಗೆದುಕೊಂಡಿದ್ದರೆ, ಅವರಿಗೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು’ ಎಂದು ಅಮಿತ್ ಶಾ ಹೇಳಿದ್ದರು.