ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಡರಾತ್ರಿ ಬೆಂಗಳೂರಿಗೆ ಚುನಾವಣಾ ಚಾಣಕ್ಯ ಅಮಿತ್ ಶಾ ಆಗಮಿಸಿದ್ದಾರೆ.
ವಿಶೇಷ ವಿಮಾನದ ಮೂಲಕ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಅಮಿತ್ ಶಾ ಆಗಮಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಶಾಲು ಹೊದಿಸಿ ಸ್ವಾಗತ ಕೋರಿದ್ದಾರೆ.
ತಾಜ್ ವೆಸ್ಟ್ ಎಂಡ್ ಹೊಟೇಲ್‌ನಲ್ಲಿ ಅಮಿತ್ ಶಾ ವಾಸ್ತವ್ಯ ಹೂಡಿದ್ದು, ಇಂದು ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು ಸಂಜೆ ೫:೫೦ಕ್ಕೆ ಚನ್ನಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬಳಿಯ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದು, ಅಲ್ಲಿಂದ ಚಿಕ್ಕಮಗಳೂರಿಗೆ ಬರಲಿದ್ದಾರೆ. ನಂತರ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ಆರಂಭಿಸಲಿದ್ದಾರೆ.
ಅಮಿತ್ ಶಾ ಕಾರ್ಯಕ್ರಮದಲ್ಲಿ ವಿಜಯೇಂದ್ರ, ಅಶೋಕ್, ಕುಮಾರಸ್ವಾಮಿ, ನಿಖಿಲ್ ಸೇರಿ ಸ್ಥಳೀಯ ಮುಖಂಡರು ಭಾಗಿಯಾಗಲಿದ್ದು ಸುಮಾರು 25 ಸಾವಿರಕ್ಕೂ ಹೆಚ್ಚು ಜನರನ್ನ ಸೇರಿಸಲು ಬಿಜೆಪಿ ಮುಖಂಡರು ಪ್ಲಾನ್ ಮಾಡಿದ್ದಾರೆ. ಒಟ್ಟಾರೆ ಕಾಂಗ್ರೆಸ್‌ನ ಏಕೈಕ ಸಂಸದನನ್ನ ಮಣಿಸಲು ಬಿಜೆಪಿ-ಜೆಡಿಎಸ್ ಮೊದಲ ಬಾರಿಗೆ ಬೃಹತ್ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದೆ.