ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದ ಅಮಿತ್ ಶಾ: ಸಿಎಂ ಸಿದ್ದರಾಮಯ್ಯ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದು, ಕರ್ನಾಟಕಕ್ಕೆ ಅಮಿತ್ ಶಾ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ತೀವ್ರ ಬರಗಾಲವಿದೆ.2-3 ಬಾರಿ ಪತ್ರ ಬರೆದಿದ್ದೇವೆ. ಐದು ತಿಂಗಳು ಕಳೆದರೂ ಇದುವರೆಗೆ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ. ಬರಪರಿಹಾರ ಕೊಡಲು ಇರುವ ಸಮಿತಿಗೆ ಅವರೇ ಅಧ್ಯಕ್ಷರು. ದೇಶದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ರೈತರು ಬರಗಾಲದಲ್ಲಿ ಕಷ್ಟಪಡುತ್ತಿದ್ದಾರೆ. ಬರಗಾಲ ಬಂದಾಗ ಎಂ.ಎನ್. ನರೇಗಾ ಯೋಜನೆಯಡಿ 150 ಮಾನವದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಇಂದಿನವರೆಗೆ ಹೆಚ್ಚಿಸಿಲ್ಲ. ನಮ್ಮ ಪತ್ರಕ್ಕೂ ಉತ್ತರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!