ಸಿಎಂ ಪಟ್ಟಕ್ಕಾಗಿ ಕಾಂಗ್ರೆಸ್‌ ಒಳಜಗಳ: ಅಮಿತ್‌ ಶಾ ಟಾಂಗ್‌

ಹೊಸದಿಗಂತ ವರದಿ ಬಾಗಲಕೋಟೆ:

ಕಾಂಗ್ರೆಸ್ ನಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎಂಬ ಜಗಳದಲ್ಲಿದ್ದಾರೆ. ಈ ಸಾಲಿನಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ಧರಾಮಯ್ಯ ಇಬ್ಬರು ಮುಖ್ಯಮಂತ್ರಿ ಪಟ್ಟಕ್ಕೆ ಪೈಪೋಟಿ ನಡೆಸುತ್ತಿದ್ದಾರೆ. ಆದರೆ ಈ ಬಾರಿ ಮತ್ತೆ ಬಿಜೆಪಿ ಸರ್ಕಾರ ಬರಲಿದೆ, ವಿನಾಕಾರಣ ಜಗಳವಾಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವ್ಯಂಗ್ಯ ವಾಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ತೇರದಾಳ ಮತಕ್ಷೇತ್ರದ ರಬಕವಿ ಪಟ್ಟಣದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಬಹಿರಂಗ ಸಭೆಯನ್ನು, ನೇಕಾರರ ಕೈ ಮಗ್ಗ ನೇಯುವ ಮೂಲಕ ಚಾಲನೆ ನೀಡಿದರು. ಬಳಿಕ ಭಾಷಣದ ಪ್ರಾರಂಭದಲ್ಲಿ ಬಸವಣ್ಣನವರ ವಚನಗಳನ್ನ ರಕ್ಷಿಸಿದ, ಪ್ರಚಾರ ಪಡಿಸಿದ ಅಲ್ಲಮಪ್ರಭು ಅವರಿಗೆ ನಮಿಸಿದರು.

ನಂತರ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆಯಾಗಬೇಕಿದೆ ಎಂದು ಹೇಳಿ,
ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಬೇಕಿದೆ ಸಚಿವ ಮುರಗೇಶ ನಿರಾಣಿ, ಗೋವಿಂದ ಕಾರಜೋಳ,ಜಗದೀಶ ಗುಡಗುಂಟಿ, ಸಿದ್ದುಸವದಿ ಯವರನ್ನ ವೇದಿಕೆ ಮುಂಭಾಗದಲ್ಲಿ ಕರೆದು ಬಿಜೆಪಿ ಗೆಲ್ಲಿಸಲು ಅಮಿತ್ ಶಾ ಮನವಿ ಮಾಡಿದರು.

ಮೋದಿ ಅವರ ಕೈ ಬಲಪಡಿಸಬೇಕಿದೆ. ರಾಜ್ಯದಲ್ಲಿ ಯಡಿಯೂರಪ್ಪ, ಬೊಮ್ಮಾಯಿ‌ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಸಾಕಷ್ಟು‌ಅನುದಾನ ಬಂದಿದೆ. ಕಾಂಗ್ರೆಸ್ ಸರ್ಕಾರ ಬಂದ್ರೆ ಅಭಿವೃದ್ದಿ ರಿವರ್ಸ್ ಗೇರ್ ನಲ್ಲಿ ಹೋಗುತ್ತದೆ ಎಂದು ಟೀಕಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!