ಅಮಿತ್ ಶಾಗೆ ಇತಿಹಾಸ ಗೊತ್ತಿಲ್ಲ, ತಿರುಚುತ್ತಲೇ ಇದ್ದಾರೆ: ರಾಹುಲ್ ಗಾಂಧಿ ವಾಗ್ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, ಬಿಜೆಪಿ ನಾಯಕನಿಗೆ ಇತಿಹಾಸದ ಬಗ್ಗೆ ತಿಳಿವಳಿಕೆ ಇಲ್ಲ, ಅದನ್ನು ತಿರುಚುತ್ತಲೇ ಇದ್ದಾರೆ ಎಂದು ಹೇಳಿದ್ದಾರೆ.

ನೆಹರೂ ಅವರು ನಮ್ಮ ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ವರ್ಷಗಟ್ಟಲೇ ಜೈಲಿನಲ್ಲಿ ಇದ್ದರು. ಅಮಿತ್ ಶಾ ಅವರಿಗೆ ಇತಿಹಾಸ ಗೊತ್ತಿಲ್ಲ, ಅದನ್ನು ತಿರುಚುತ್ತಲೇ ಇದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದೆ.ಅವರಿಗೆ ಮೂಲ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಸಕ್ತಿಯಿಲ್ಲ. ಆದ್ರೆ ಜನರ ಹಕ್ಕಿಗಾಗಿ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಅವರು ಹೇಳಿದರು.

ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಮಾಡಿದ ಪ್ರಮಾದಗಳಿಂದಾಗಿ ಜಮ್ಮು ಮತ್ತು ಕಾಶ್ಮೀರದ ಜನರು ಕಷ್ಟ ಅನುಭವಿಸಬೇಕಾಯಿತು ಎಂದು ಅಮಿತ್ ಶಾ, ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ ದೂರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!