ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ: ಕಾಂಗ್ರೆಸ್ ಐಟಿ ಸೆಲ್‌ನ ಐವರು ಸದಸ್ಯರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಕಲಿ ವಿಡಿಯೋಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ನ ಐವರು ಸದಸ್ಯರನ್ನು ಬಂಧಿಸಿದ್ದಾರೆ.

ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ (Revanth Reddy) ಅವರಿಗೆ ಸಮನ್ಸ್ ನೀಡಿದ್ದರು.

ರೇವಂತ್ ರೆಡ್ಡಿ ಪರ ವಕೀಲರು ಬುಧವಾರ ದೆಹಲಿ ಪೊಲೀಸರ ಮುಂದೆ ಹಾಜರಾಗಿ, ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೋ ರಚಿಸುವಲ್ಲಿ ಅಥವಾ ಪೋಸ್ಟ್ ಮಾಡುವುದರ ಹಿಂದೆ ರೇವಂತ್ ರೆಡ್ಡಿ ಅವರ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದರು.ವಿಡಿಯೋ ವನ್ನು ಹಂಚಿಕೊಂಡ ಆರೋಪದ ಮೇಲೆ ವಿವಿಧ ವಿರೋಧ ಪಕ್ಷಗಳ ಇನ್ನೂ ಐದು ಮಂದಿಗೂ ನೋಟಿಸ್ ನೀಡಲಾಗಿದೆ.

ರೇವಂತ್ ರೆಡ್ಡಿ ಮತ್ತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ)ಯ ನಾಲ್ವರು ಸದಸ್ಯರಾದ ಶಿವಕುಮಾರ್ ಅಂಬಾಲಾ, ಅಸ್ಮಾ ತಸ್ಲೀಮ್, ಸತೀಶ್ ಮನ್ನೆ ಮತ್ತು ನವೀನ್ ಪೆಟ್ಟೆಮ್ ಅವರಿಗೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 91 ಮತ್ತು 160ರ ಅಡಿಯಲ್ಲಿ ಸಮನ್ಸ್ ನೀಡಲಾಗಿದೆ. ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರಿಗೂ ದೆಹಲಿ ಪೊಲೀಸರು ಮೇ 2ರಂದು ಸಮನ್ಸ್ ಜಾರಿ ಮಾಡಿದ್ದಾರೆ.

ಏನಿದು ಪ್ರಕರಣ?
ಮುಸ್ಲಿಮರಿಗೆ ನೀಡಲಾದ ಶೇ. 4ರಷ್ಟು ‘ಅಸಾಂವಿಧಾನಿಕ’ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಅಮಿತ್ ಶಾ ತೆಲಂಗಾಣದಲ್ಲಿ ಮಾತನಾಡುತ್ತಿರುವ ಹಳೆಯ ವಿಡಿಯೋವನ್ನು ಬಳಸಿಕೊಂಡು ಅವರು ಎಸ್​ಸಿ ಮತ್ತು ಎಸ್​ಟಿ ಮೀಸಲಾತಿ ತೆಗೆಯಬೇಕು ಎಂದು ಹೇಳಿದ್ದಾರೆ ಎನ್ನುವಂತೆ ಬದಲಾಯಿಸಲಾಗಿತ್ತು. ಇದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಇದಾದ ಬಳಿಕ ಗೃಹ ಸಚಿವಾಲಯ ಮತ್ತು ಬಿಜೆಪಿ ದೂರು ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!