Friday, March 31, 2023

Latest Posts

ಮಂಗಳೂರಿನಲ್ಲಿ ಅಮಿತ್‌ ಶಾ ರೋಡ್‌ ಶೋ: ಸಾಥ್ ನೀಡಿದ ಸಿಎಂ, ಬಿಎಸ್‌ವೈ, ನಳಿನ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪುತ್ತೂರಿನಲ್ಲಿ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಉದ್ಘಾಟನೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳೂರು ನಗರದಲ್ಲಿ ರೋಡ್‌ಶೋ ನಡೆಸಿದರು.

ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಗಮನ ಪ್ರದೇಶದಿಂದ ಕೆಂಜಾರು ಶ್ರೀದೇವಿ ಕಾಲೇಜಿನವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದರು. ಈ ವೇಳೆ ಅಮಿತ್ ಶಾ ಅವರನ್ನು ನೋಡಲು ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಮಂದಿ ನೆರೆದಿದ್ದರು. ಕಾರ್ಯಕರ್ತರು ಹರ್ಷೋದ್ಗಾರ ವ್ಯಕ್ತಪಡಿಸಿ ಸಂಭ್ರಮಿಸಿದರು

ಸಚಿವ ಅಮಿತ್ ಶಾ ಅವರ ರೋಡ್‌ ಶೋ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‍ ಕಟೀಲು ಅವರೂ ಭಾಗಹಿಸಿ ಅಮಿತ್ ಶಾ ಅವರಿಗೆ ಸಾಥ್ ನೀಡಿದರು.

ವಿವಿಧ ಬ್ಯಾಂಡ್‌ ಸೆಟ್, ವೈವಿಧ್ಯ ವೇಷಭೂಷಣಗಳ ಮೂಲಕ ಗೃಹ ಸಚಿವರಿಗೆ ಸ್ವಾಗತ ಕೋರಲಾಯಿತು. ಸಾಕಷ್ಟು ಜನ ನೆರೆದಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮೆರವಣಿಗೆಯಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!