ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಯಮತ್ತೂರಿನ ಪೀಲಮೇಡುವಿನಲ್ಲಿ ನೂತನವಾಗಿ ನಿರ್ಮಿಸಲಾದ ಬಿಜೆಪಿ ಕಚೇರಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದ್ದಾರೆ.
ಎರಡು ದಿನಗಳ ತಮಿಳುನಾಡು ಭೇಟಿಗಾಗಿ ಕೊಯಮತ್ತೂರಿಗೆ ಆಗಮಿಸಿದ ಅಮಿತ್ ಶಾ ಅವರಿಗೆ ಬಿಜೆಪಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.
ಬಿಜೆಪಿ ನೂತನ ಕಚೇರಿ ಉದ್ಘಾಟಿಸಿದ ಬಳಿಕ, ಬಿಜೆಪಿ ಕಾರ್ಯಕರ್ತರೊಂದಿಗೆ ರಾಜ್ಯ ರಾಜಕೀಯ ಪರಿಸ್ಥಿತಿಯ ಕುರಿತು ಅಮಿತ್ ಶಾ ಚರ್ಚಿಸಿದ್ದಾರೆ.