ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇ 1 ರಂದು ನಮ್ಮ ಗೃಹ ಸಚಿವ ಅಮಿತ್ ಶಾ ಅವರು ನೇಹಾ ಹಿರೇಮಠ ಅವರ ಮನೆಗೆ ಭೇಟಿ ನೀಡಲಿದ್ದಾರೆ. ನೇಹಾ ಕುಟುಂಬಸ್ಥರಿಗೆ ಸಾಂತ್ವನ ಮಾಡಲಿದ್ದಾರೆ ಎಂದು ಮಾಜಿ ಸಚಿವ ಮುರಗೇಶ್ ನಿರಾಣಿ ಹೇಳಿದ್ದಾರೆ.
ನೇಹಾ ಹಿರೇಮಠ ಅವರ ಮನೆಗೆ ಭೇಟಿ ನೀಡುವ ಮೂಲಕ ನಿರಂಜನ ಹಾಗೂ ತಾಯಿ ಗೀತಾ ಹಿರೇಮಠ ಅವರಿಗೆ ಸಾಂತ್ವನ ಹೇಳಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯನ್ನು ನಾನು ಖಂಡಿಸಿಸುತ್ತೇನೆ. ಅಮಿತ್ ಶಾ ಅವರು ಬಂದಾಗ ಈ ಬಗ್ಗೆ ಚರ್ಚೆ ಮಾಡಿ ಮುಂದಿನ ತನಿಖೆ ಬಗ್ಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.