Friday, June 9, 2023

Latest Posts

ಕೆಎಲ್ಇ ಸಂಸ್ಥೆಯ ಅಮೃತ ಮಹೋತ್ಸವದಲ್ಲಿ ಅಮಿತ್‌ ಶಾ ಭಾಗಿ: ಬೃಹತ್ ಕ್ರೀಡಾಂಗಣ ಉದ್ಘಾಟನೆ

ಹೊಸದಿಗಂತ ವರದಿ ಹುಬ್ಬಳ್ಳಿ:

ಇಲ್ಲಿಯ ವಿದ್ಯಾನಗರದ ಕೆಎಲ್ ಇ ಸಂಸ್ಥೆ ಬಿವಿಬಿ ಎಂಜಿನಿಯರಿಂಗ್ ಹಾಗೂ ತಾಂತ್ರಿಕ ಮಹಾವಿದ್ಯಾಲಯ ಅಮೃತ ಮಹೋತ್ಸವ ಸಮಾರಂಭ ಹಾಗೂ ಬೃಹತ್ ಒಳಾಂಗಣ ಕ್ರೀಡಾಂಗಣವನ್ಜು ಕೇಂದ್ರ ಗೃಹ ಸಚಿವ ಅಮಿತ್ ಶಾ  ಉದ್ಘಾಟಿಸಿದರು.

ಬಳಿಕ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ದೇಶ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷಣ ಸೇವೆ ಮಾಡುತ್ತಿರುವ ಕೆಎಲ್ ಇ ಬಿವಿಬಿ ಎಂಜಿನಿಯರಿಂಗ್ ಹಾಗೂ ತಾಂತ್ರಿಕ ಕಾಲೇಜಿನ ಅಮೃತ ಮಹೋತ್ಸವ ಆಚರಿಸುತ್ತಿದೆ.‌ ಇಂತಹ ಸಂಭ್ರಮದಲ್ಲಿ ಭಾಗವಹಿಸಿರುವುದು ನನ್ನ ಸೌಭಾಗ್ಯ ಎಂದರು.

ವಿಶ್ವದ ಎಲ್ಲ ದೇಶಗಳು ಭಾರತ ದೇಶವನ್ನು ತಿರುಗಿ ನೋಡುತ್ತಿವೆ. ದೇಶದ ಆರ್ಥಿಕತೆ ವಿಶ್ವದಲ್ಲಿ 5ನೇ ಸ್ಥಾ‌ನಕ್ಕೇರಿದೆ. ಬರುವ ದಿನಗಳಲ್ಲಿ ಮೂರನೇ ಸ್ಥಾನಕ್ಕೇರಲು ದೇಶದ ಯುವಜನರ ಪಾತ್ರ ಮಹತ್ವದಾಗಿದೆ ಎಂದು ತಿಳಿಸಿದರು.

ತಿರುಪತಿಯ ವಿಶ್ವ ಧರ್ಮ ಚೇತನ ಮಂಚನ ಬ್ರಹ್ಮಶ್ರೀ ಗುರುದೇವ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದಿಯ ಸದಸ್ಯ ಬಿ.ಎಸ್‌‌. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, , ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಮುರಗೇಶ ನಿರಾಣಿ, ಕೆಎಲ್ ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಕುಲಪತಿ ಅಶೋಕ ಶೆಟ್ಟರ, ಮಹಾಂತೇಶ ಕೌಜಲಗಿ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!