Monday, July 4, 2022

Latest Posts

ಪ.ಪಂಗಡಕ್ಕೆ ಹಾಲಕ್ಕಿ ಸೇರ್ಪಡೆ ಕುರಿತ ಶಾಸಕಿ ರೂಪಾಲಿ ಮನವಿಗೆ ಅಮಿತ್ ಶಾ ಸ್ಪಂದನೆ

ಹೊಸದಿಗಂತ ವರದಿ, ಕಾರವಾರ:

ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವುದು, ಹುಬ್ಬಳ್ಳಿ ಅಂಕೋಲಾ ರೈಲು ಮಾರ್ಗ ಸೇರಿದಂತೆ ಶಾಸಕರಾದ ರೂಪಾಲಿ ಎಸ್.ನಾಯ್ಕ ಅವರ ಬೇಡಿಕೆಗಳ ಬಗ್ಗೆ ಕೇಂದ್ರ ಗೃಹ ಸಚಿವ  ಅಮಿತ್ ಶಾ ಪೂರಕವಾಗಿ ಸ್ಪಂದಿಸಿದ್ದಾರೆ.
ಇತ್ತೀಚೆಗೆ ಗೋವಾಕ್ಕೆ ಆಗಮಿಸಿದ್ದ  ಅಮಿತ್ ಶಾ ಅವರನ್ನು ಭೇಟಿಯಾದ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪಾಲಿ ಎಸ್.ನಾಯ್ಕ ಕ್ಷೇತ್ರದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಮಾಡಿದ್ದರು. ಶಾಸಕರು ನೀಡಿದ ಪ್ರತಿಯೊಂದು ಮನವಿಯನ್ನೂ  ಅಮಿತ್ ಶಾ ಸಂಬಂಧಪಟ್ಟ ಸಚಿವಾಲಯಕ್ಕೆ ಸೂಕ್ತ ಕ್ರಮಕ್ಕಾಗಿ ಕಳುಹಿಸಿದ್ದಾರೆ. ಆದರೆ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಮನವಿಯ ಬಗ್ಗೆ ಸ್ವತಃ ಅಮಿತ್ ಶಾ ಕ್ರಮ ಕೈಗೊಳ್ಳಲಿದ್ದಾರೆ.
ಪರಿಶಿಷ್ಟ ಪಂಗಡಕ್ಕೆ ಹಾಲಕ್ಕಿ ಒಕ್ಕಲಿಗರ ಸೇರ್ಪಡೆಗೆ ಕ್ರಮ
ಪರಿಶಿಷ್ಟ ಪಂಗಡಕ್ಕೆ ತಮ್ಮನ್ನು ಸೇರ್ಪಡೆ ಮಾಡಬೇಕೆನ್ನುವುದು ಸುಮಾರು 1.50 ಲಕ್ಷದಷ್ಟು ಜನಸಂಖ್ಯೆ ಹೊಂದಿರುವ ಹಾಲಕ್ಕಿ ಒಕ್ಕಲಿಗರ ಬಹುಕಾಲದ ಬೇಡಿಕೆಯಾಗಿದೆ. ಪದ್ಮಶ್ರೀ ಸುಕ್ರಿ ಗೌಡ ಹಾಗೂ ಪದ್ಮಶ್ರೀ ತುಳಸಿ ಗೌಡ ಇದೆ ಸಮುದಾಯದಿಂದ ಬಂದು ನಾಡಿಗೆ, ರಾಷ್ಟ್ರಕ್ಕೆ ಹೆಮ್ಮೆ ತಂದಿದ್ದಾರೆ. ಹಾಲಕ್ಕಿ ಒಕ್ಕಲಿಗರ ಬಗ್ಗೆ ಈಗಾಗಲೆ ವೈಜ್ಞಾನಿಕ ಅಧ್ಯಯನ ನಡೆಸಲಾಗಿದೆ ಹಾಗೂ ಇವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸನ್ನೂ ಮಾಡಲಾಗಿದೆ. ಹಾಲಕ್ಕಿ ಒಕ್ಕಲಿಗರ ಈ ನ್ಯಾಯಯುತ ಬೇಡಿಕೆಯನ್ನು ಈಡೇರಿಸಲು ಕ್ರಮ ಕೈಗೊಳ್ಳುವಂತೆ ರೂಪಾಲಿ ಎಸ್.ನಾಯ್ಕ ಮನವಿ ಮಾಡಿದ್ದರು. ಈ ಬೇಡಿಕೆಗೆ ಸ್ಪಂದಿಸಿರುವ ಅಮಿತ್ ಶಾ ಈ ಬೇಡಿಕೆಯ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಶಾಸಕರಿಗೆ ಕಳುಹಿಸಿದ ಪತ್ರದಲ್ಲಿ  ಅಮಿತ್ ಶಾ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss