Monday, October 2, 2023

Latest Posts

ಮಣಿಪುರ ಗಲಭೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇಂದ್ರ ಗೃಹ ಸಚಿವ ಅಮಿತ್ ಶಾ ಮಣಿಪುರ ರಾಜ್ಯದಲ್ಲಿ ಹಿಂಸಾತ್ಮಕ ಗಲಭೆಗಳ ಕುರಿತು ಪ್ರಮುಖ ಆದೇಶಗಳನ್ನು ಹೊರಡಿಸಿದ್ದಾರೆ. ಕಳೆದ ಮೂರು ದಿನಗಳಿಂದ ಮಣಿಪುರಕ್ಕೆ ತೆರಳಿ ಗಲಭೆ ಕುರಿತು ಸ್ಥಳೀಯ ಸಿಎಂ ಎನ್.ಬಿರೇನ್ ಸಿಂಗ್ ಹಾಗೂ ಇತರರೊಂದಿಗೆ ಚರ್ಚಿಸಿದ ಅವರು, ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಕರಣವನ್ನು ವಿಶೇಷ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ತನಿಖೆ ನಡೆಸಲಿದೆ. ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ತಂಡದಲ್ಲಿ ತನಿಖೆ ನಡೆಯಲಿದೆ. ಯಾವುದೇ ಪಕ್ಷಪಾತವಿಲ್ಲದೆ ಕಾನೂನುಬದ್ಧವಾಗಿ ಮತ್ತು ಸಂಪೂರ್ಣ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಾಗುವುದು ಎಂದು ಮಣಿಪುರದ ಜನತೆಗೆ ತಿಳಿಸುತ್ತಿದ್ದೇನೆ ಎಂದು ಅಮಿತ್ ಶಾ ಹೇಳಿದ್ದಾರೆ.

ಈಶಾನ್ಯ ರಾಜ್ಯದಲ್ಲಿನ ಹಿಂಸಾಚಾರದ ಘಟನೆಗಳ ಕುರಿತು ಸಿಬಿಐ ವಿಶೇಷ ತಂಡದಿಂದ ತನಿಖೆಯ ಮೇಲ್ವಿಚಾರಣೆಗೆ ಕೇಂದ್ರ ಸರ್ಕಾರವು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ.

ಹಿಂಸಾಚಾರದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಲಾ 5 ಲಕ್ಷ ರೂಪಾಯಿಗಳನ್ನು ನೀಡಿವೆ ಮತ್ತು ಸಂಘರ್ಷದಿಂದ ನೊಂದವರಿಗೆ ಪರಿಹಾರ ಮತ್ತು ಪುನರ್ವಸತಿಯನ್ನು ಸಿದ್ಧಪಡಿಸಿವೆ. ಮಣಿಪುರದ ರಾಜ್ಯಪಾಲರು ನಾಗರಿಕ ಸಮಾಜದ ಸದಸ್ಯರನ್ನೊಳಗೊಂಡ ಶಾಂತಿ ಸಮಿತಿಯ ಮುಖ್ಯಸ್ಥರಾಗಿರುತ್ತಾರೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!